Connect with us

    LATEST NEWS

    ಜೂನ್ 25 ರವರೆಗೆ ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ – ಹವಾಮಾನ ಇಲಾಖೆ

    ಮಂಗಳೂರು ಜೂನ್ 22: ಮುಂಗಾರು ಮಳೆ ಆರಂಭದ ಬಳಿಕ ಕೊಂಚ ರಿಲಾಕ್ಸ್ ಆಗಿದ್ದು, ಇದೀಗ ಮತ್ತೆ ಅಬ್ಬರಿಸಲು ಪ್ರಾರಂಭಿಸಿದೆ. ಇದೀಗ ಹವಾಮಾನ ಇಲಾಖೆ ಕೂಡ ಜೂನ್ 25 ರವರೆಗೆ ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.


    ಪೂರ್ವ ಅರಬ್ಬೀ ಸಮುದ್ರದ ಕೇರಳ, ಕರ್ನಾಟಕ ಕರಾವಳಿ ಉದ್ದಕ್ಕೂ ಸುಳಿಗಾಳಿ ಪರಿಣಾಮ ಕರಾವಳಿ ಭಾಗದಲ್ಲಿ ಇವತ್ತಿನಿಂದ 25ರ ವರೆಗೆ ವ್ಯಾಪಕ ಮಳೆ ಸಾಧ್ಯತೆ ಇದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವು ಕಡೆ ಭಾರಿ ಮಳೆ ಸಾಧ್ಯತೆ ಇದ್ದು, 25ರ ವರೆಗೆ ಕರಾವಳಿ ಜಿಲ್ಲೆಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಇಂದು ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆಯಾಗಿದೆ. ಜಿಲ್ಲೆಯ ಬೆಳ್ತಂಗಡಿ, ಬಂಟ್ವಾಳ, ಪುತ್ತೂರು, ಸುಳ್ಯ ಮುಂತಾದ ಪ್ರದೇಶಗಳಲ್ಲಿ ಮಳೆಯಾಗಿದೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *