LATEST NEWS
ಜಿಲ್ಲೆಯಾದ್ಯಂತ ಭಾರಿ ಮಳೆ ಕತ್ತಲಲ್ಲಿ ಚುನಾವಣಾ ಸಿಬ್ಬಂದಿಗಳು
ಜಿಲ್ಲೆಯಾದ್ಯಂತ ಭಾರಿ ಮಳೆ ಕತ್ತಲಲ್ಲಿ ಚುನಾವಣಾ ಸಿಬ್ಬಂದಿಗಳು
ಮಂಗಳೂರು ಮೇ 11: ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ರಾತ್ರಿ ಗಡುಗು ಸಿಡಿಲು ಸಹಿತ ಭಾರಿ ಮಳೆ ಸುರಿದಿದೆ. ಹವಮಾನ ಇಲಾಖೆ ನಾಳೆ ರಾಜ್ಯಾದ್ಯಂತ ಬಾರಿ ಮಳೆ ಸುರಿಯಲಿದೆ ಎಂಬ ಮುನ್ಸೂಚನೆ ಮತದಾನದ ಮೇಲೆ ನೇರ ಪರಿಣಾಮ ಬೀರಲಿದೆ ಎಂದು ಹೇಳಲಾಗಿದೆ.
ಅರಬಿ ಸಮುದ್ರ ಮತ್ತು ಬಂಗಾಲಕೊಲ್ಲಿಯಲ್ಲಿನ ಸುಳಿಗಾಳಿ ಕರ್ನಾಟಕ ಸೇರಿದಂತೆ ದೇಶದ ವಿವಿಧೆಡೆ ಭಾರಿ ಗುಡುಗು ಸಿಡಿಲು ಸಹಿತ ಮಳೆಗೆ ಕಾರಣವಾಗಿದೆ. ಈ ನಡುವೆ ಮೇ 12 ರಂದು ಕರ್ನಾಟಕದ ಕರಾವಳಿ ಸೇರಿದಂತೆ ವಿವಿಧ ಕಡೆಗಳಲ್ಲಿ ಭಾರಿ ಮಳೆ ಸುರಿಯಲಿದೆ ಎಂದು ಪ್ರಾಕೃತಿಕ ವಿಪತ್ತು ನಿರ್ವಹಣಾ ಕೇಂದ್ರ ಈಗಾಗಲೇ ಮುನ್ಸೂಚನೆ ನೀಡಿದೆ.
ಈ ನಡುವೆ ಇಂದು ರಾತ್ರಿ ಜಿಲ್ಲೆಯಾದ್ಯಂತ ಭಾರಿ ಮಳೆ ಸುರಿದಿದೆ. ಗುಡುಗು ಸಿಡಿಲು ಸಹಿತ ಸುರಿದ ಮಳೆಗೆ ಜಿಲ್ಲೆಯಾದ್ಯಂತ ವಿದ್ಯುತ್ ನಲ್ಲಿ ವ್ಯತ್ಯಯ ವುಂಟಾಗಿದ್ದು, ಮತದಾನದ ಕೇಂದ್ರಗಳಲ್ಲಿನ ಸಿಬ್ಬಂದಿಗಳು ನಾಳೆ ನಡೆಯುವ ಮತದಾನಕ್ಕೆ ಪೂರ್ವ ತಯಾರಿಗೆ ತೊಡಕುಂಟು ಮಾಡಿದೆ.
ಕೆಲವು ಕೇಂದ್ರಗಳಲ್ಲಿ ವಿದ್ಯುತ್ ಇಲ್ಲದೆ ಮೇಣದ ಬತ್ತಿಗಳಲ್ಲಿ ಪೂರ್ವ ತಯಾರಿ ನಡೆಸುತ್ತಿರುವುದು ಕಂಡು ಬಂದಿದೆ.
ಕರ್ನಾಟಕದಲ್ಲಿ ಮಧ್ಯಾಹ್ನ 2 ರ ನಂತರ ಮಳೆ ಪ್ರಮಾಣ ಅಧಿಕವಾಗಲಿದೆ ಎಂಬ ಮುನ್ಸೂಚನೆ ಹಿನ್ನಲೆಯಲ್ಲಿ ವಿಪತ್ತು ನಿರ್ವಹಣಾ ಕೇಂದ್ರ ಅಧಿಕಾರಿಗಳು ಬೆಳಿಗ್ಗೆಯೇ ಮತ ಚಲಾಯಿಸುವಂತೆ ತಿಳಿಸಿದ್ದಾರೆ.