LATEST NEWS
ಕರಾವಳಿ ಜಿಲ್ಲೆಗಳಲ್ಲಿ ಮತ್ತೆ ಮಳೆ ಅಬ್ಬರ – ಜೂನ್ 27 ರ ವರೆಗೆ ಭಾರೀ ಮಳೆ ಸಾಧ್ಯತೆ

ಮಂಗಳೂರು ಜೂನ್ 25: ಮುಂಗಾರು ಮಳೆ ತನ್ನ ಅಬ್ಬರ ಮುಂದುವರೆಸಿದೆ. ಈಗಾಗಲೇ ರಾಜ್ಯದಲ್ಲಿ ಉತ್ತಮ ಮುಂಗಾರುಮಳೆಯಾಗಿದೆ. ಕಳದೆ 2 ವಾರಗಳಿಂದ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದ್ದ ಮಳೆ ಇದೀಗ ಮತ್ತೆ ಶುರುವಾಗಿದೆ. ಇನ್ನೂ ಜೂನ್ 27 ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜೂ. 25ರಿಂದ 27ರ ವರೆಗೆ ಭಾರಿ ಮಳೆಯಾಗುವ ಸಾಧ್ಯತೆಗಳಿವೆ. ಹೀಗಾಗಿ ಈ 3 ಜಿಲ್ಲೆಗಳಲ್ಲಿ ಈ ಅವಧಿಯಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.

ಕರಾವಳಿ ಜಿಲ್ಲೆಗಳ ಸಮೀಪದಲ್ಲಿರುವ ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಉತ್ತರ ಒಳನಾಡಿದ ಬೆಳಗಾವಿ ಜಿಲ್ಲೆಗಳಲ್ಲೂ ಬುಧವಾರ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯು ತಿಳಿಸಿದೆ.
ಕರಾವಳಿ ಕರ್ನಾಟಕದ ಸಮುದ್ರ ತೀರದಲ್ಲಿ ಪ್ರತಿ ಗಂಟೆಗೆ 60 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಗಳಿದ್ದು, ಮೀನುಗಾರರಿಗೆ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.