DAKSHINA KANNADA
ಭಾರೀ ಗಾಳಿ ಮಳೆ – ಕಡಬ ಸುಳ್ಯ ತಾಲೂಕಿನಲ್ಲಿ ಶಾಲೆಗಳಿಗೆ ಇಂದು (ಜುಲೈ 03) ರಂದು ರಜೆ

ಸುಳ್ಯ ಜುಲೈ 03: ದಕ್ಷಿಣಕನ್ನಡದಲ್ಲಿ ಮಳೆ ಅಬ್ಬರ ಜೋರಾಗಿದೆ. ಮಳೆ ಜೊತೆ ಬಿರುಗಾಳಿ ರೀತಿಯಲ್ಲಿ ಗಾಳಿಯೂ ಬೀಸುತ್ತಿದೆ. ಇದೀಗ ನಿರಂತರ ಮಳೆಯಾಗುತ್ತಿರುವುದರಿಂದ ಕಡಬ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು ,ಪ್ರಾಥಮಿಕ ಮತ್ತು ಪ್ರೌಢಶಾಲೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಜು. 03 ರಂದು ರಜೆ ಘೋಷಿಸಲಾಗಿದೆ ಎಂದು ತಹಶೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುಳ್ಯದಲ್ಲೂ ಮಳೆಯಾಗುತ್ತಿರುವುದರಿಂದ ಸುಳ್ಯ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು ,ಪ್ರಾಥಮಿಕ ಮತ್ತು ಪ್ರೌಢಶಾಲೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಜು.03 ರಂದು ರಜೆ ಘೋಷಿಸಲಾಗಿದೆ ಎಂದು ತಹಶೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
