Connect with us

    MANGALORE

    ನಿರಂತರ ಮಳೆ – ದಕ್ಷಿಣಕನ್ನಡ ಉಡುಪಿ ಜಿಲ್ಲೆಗಳಲ್ಲಿ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ನಾಳೆ (ಜುಲೈ 26) ರಜೆ

    ಮಂಗಳೂರು ಜುಲೈ 25: ಕರಾವಳಿಯಲ್ಲಿ ಮಳೆ ಅಬ್ಬರ ಮಂದುವರೆದಿದ್ದು, ಉಡುಪಿ ಜಿಲ್ಲೆ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಶಾಲಾ ಮತ್ತು ಪಿಯು ಕಾಲೇಜುಗಳಿಗೆ ನಾಳೆ (ಜುಲೈ 26) ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶಿದ್ದಾರೆ.


    ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಿಂದಾಗಿ ನದಿ ,ಹಳ್ಳ ಕೊಳ್ಳಗಳಲ್ಲಿ ಹೆಚ್ಚಿನ ನೀರಿನ ಹರಿವು ಹಾಗೂ ಹೆಚ್ಚು ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆಯ ವರದಿ ಮಾಡಿದೆ. ಈ ಹಿನ್ನೆಲೆ ಉಡುಪಿ ಜಿಲ್ಲಾ ವ್ಯಾಪ್ತಿಯ ಎಲ್ಲಾ ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ದಕ್ಷಿಣಕನ್ನಡ ಜಿಲ್ಲೆಯಲ್ಲೂ ಹವಮಾನ ಮುನ್ಸೂಚನೆಯಂತೆ ಹೆಚ್ಚು ಮಳೆಯಾಗುತ್ತಿರುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ, ಕಾಲೇಜುಗಳಿಗೆ ಜು.26ರಂದು ರಜೆ ಘೋಷಣೆ ಮಾಡಿದೆ.


    ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪದವಿಪೂರ್ವಕಾಲೇಜು, ಪದವಿ ಶಿಕ್ಷಣ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಜು.26ರ ಬುಧವಾರ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply