LATEST NEWS
ಮುಂದಿನ 24 ಗಂಟೆಗಳಲ್ಲಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಸಾಧ್ಯತೆ – ರೆಡ್ ಅಲರ್ಟ್
ಮಂಗಳೂರು ಜುಲೈ 30: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಳೆರಾಯ ತನ್ನ ಆರ್ಭಟ ಮುಂದುವರೆಸಿದ್ದು,. ನಿನ್ನೆ ಸಂಜೆಯಿಂದ ಪ್ರಾರಂಭವಾದ ಮಳೆ ಇಂದು ಮುಂದುವರೆದಿದೆ. ಈಗಾಗಲೇ ಎಡಬಿಡದೇ ಮಳೆ ಸುರಿಯುತ್ತಿದ್ದು, ಮುಂದಿನ 24 ಗಂಟೆಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದ್ದು ರೆಡ್ ಅಲರ್ಟ್ ಘೋಷಿಸಿದೆ.
ದಕ್ಷಿಣಕನ್ನಡ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ವೇಳೆ ಬಾರಿ ಮಳೆಯಾಗಲಿದ್ದು, ಗಾಳಿ 30 – 40 ಕಿಲೋ ಮೀಟರ್ ಬೀಸಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಳೆಯಿಂದಾಗಿ ಜಿಲ್ಲೆಯಲ್ಲಿ ಹಲವು ಕಡೆಗಳಲ್ಲಿ ತಗ್ಗು ಪ್ರದೇಶಗಳು ಮುಳುಗಿದ್ದು, ನೇತ್ರಾವತಿ ನದಿ ಅಪಾಯಮಟ್ಟ ನೀರಿ ಹರಿಯುತ್ತಿದೆ. ಮಾಣಿ-ಮೈಸೂರು ಹೆದ್ದಾರಿಯ ಶೇಖಮಲೆ ಶಾಲೆಯ ಬಳಿ ಗುಡ್ಡ ಕುಸಿತ ಸಂಭವಿಸಿದೆ.
ಭಾರೀ ಪ್ರಮಾಣದಲ್ಲಿ ಮಣ್ಣು ಕುಸಿದು ಬಿದ್ದು ರಸ್ತೆ ತಡೆ ಉಂಟಾಗಿದೆ. ಗುಡ್ಡ ಕುಸಿತದಿಂದಾಗಿ 4 ವಿದ್ಯುತ್ ಕಂಬಗಳು ನೆಲಕ್ಕುರುಳಿದೆ. ಗುಡ್ಡ ಕುಸಿತ ಮುಂದುವರಿದಿದ್ದು, 2 ಬದಿಗಳಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದೆ. ಪುತ್ತೂರು ಸುಳ್ಯ ರಸ್ತೆ ಸಂಚಾರ ಬಂದ್ ಆಗಿದೆ. ಉಪ್ಪಿನಂಗಡಿ ಸಮೀಪದ ಪಂಜಳ ಎಂಬಲ್ಲಿ ಹೆದ್ದಾರಿಗೆ ನೇತ್ರಾವತಿ ನದಿ ನೀರು ನುಗ್ಗಿದೆ.