LATEST NEWS
ಮಳೆ ಅವಾಂತರಕ್ಕೆ ತತ್ತರಿಸಿದ ಹಿಮಾಚಲ ಪ್ರದೇಶ – 10 ಸಾವಿರ ಕೋಟಿಗೂ ಅಧಿಕ ನಷ್ಟ

ಶಿಮ್ಲಾ ಅಗಸ್ಟ್ 17 : ಹಿಮಾಚಲ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆ ಭಾರೀ ಪ್ರಮಾಣ ನಷ್ಟ ಮಾಡಿದ್ದು, ಜಲಪ್ರಳಯಕ್ಕೆ ಇಡೀ ಹಿಮಾಚಲ ಪ್ರದೇಶ ತತ್ತರಿಸಿದ್ದು, 71ಕ್ಕೂ ಅಧಿಕ ಜನ ಸಾವನಪ್ಪಿದರೆ 10ಸಾವಿರ ಕೋಟಿಗೂ ಅಧಿಕ ನಷ್ಟ ಸಂಭವಿಸಿದೆ .
ಜುಲೈಗಿಂತ ಆಗಸ್ಟ್ 13, 14 ಹಾಗೂ 15ರ ಅವಧಿಯಲ್ಲಿ ಮಳೆಯ ಅವಾಂತರದಿಂದಾಗಿ ಹೆಚ್ಚಿನ ಹಾನಿ ಸಂಭವಿಸಿದೆ. ಸಾವಿನ ಸಂಖ್ಯೆ 71 ತಲುಪಿದ್ದು, ಸುಮಾರು 10 ಸಾವಿರ ಕೋಟಿ ರೂ. ನಷ್ಟವಾಗಿದೆ. ಜನರು ರಕ್ಷಣಾ ಹಾಗೂ ಪರಿಹಾರ ಕಾರ್ಯಗಳಲ್ಲಿ ತೊಡಗಿರುವುದರಿಂದ ಈ ಅಂದಾಜು ಹೆಚ್ಚುವ ಸಾಧ್ಯತೆಯಿದೆ. ರಾಜ್ಯ ವಿಪತ್ತು ನಿರ್ವಹಣೆಯ ಅಂಕಿ ಅಂಶದ ಪ್ರಕಾರ 1,762 ಮನೆಗಳು ಸಂಪೂರ್ಣ ಹಾನಿಯಾಗಿವೆ. 8,952 ಮನೆಗಳು ಭಾಗಶಃ ಹಾನಿಯಾಗಿವೆ. ಈ ವರ್ಷದ ಮುಂಗಾರು ಋತುವಿನಲ್ಲಿ 113 ಭೂಕುಸಿತಗಳು ಸಂಭವಿಸಿವೆ ಎಂದು ಮಾಹಿತಿ ನೀಡಿದೆ.

ಹಿಮಾಚಲದ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರು ಕಂಗ್ರಾ ಜಿಲ್ಲೆಯಲ್ಲಿ ವೈಮಾನಿಕ ಹಾಗೂ ನೆಲದ ಸಮೀಕ್ಷೆಗಳನ್ನು ನಡೆಸಿದ್ದಾರೆ. ಮಳೆಯ ಅವಾಂತರದಿಂದ ರಾಜ್ಯದಲ್ಲಾಗಿರುವ ಅವ್ಯವಸ್ಥೆಯನ್ನು ಸರಿಪಡಿಸಲು ವರ್ಷವೇ ಬೇಕಾಗಬಹುದು ಎಂದಿದ್ದಾರೆ.