Connect with us

LATEST NEWS

ಕರಾವಳಿಯಲ್ಲಿ ಮುಂಜಾನೆಯಿಂದ ಧಾರಾಕಾರ ಮಳೆ

ಕರಾವಳಿಯಲ್ಲಿ ಮುಂಜಾನೆಯಿಂದ ಧಾರಾಕಾರ ಮಳೆ

ಮಂಗಳೂರು ಜುಲೈ 26: ನಿನ್ನೆ ಸ್ವಲ್ಪ ಬಿಡುವು ಪಡೆದುಕೊಂಡಿದ್ದ ಮಳೆರಾಯ ಇಂದು ಮತ್ತೆ ಅಬ್ಬರಿಸಿದ್ದಾನೆ.

ಬೆಳಿಗ್ಗೆಯಿಂದಲೇ‌ ಧಾರಾಕಾರವಾಗಿ ಸುರಿಯುತ್ತಿದೆ. ನಗರದ‌ ಹಲವೆಡೆ ನೀರು ತುಂಬಿಕೊಂಡಿದ್ದು, ಜನರು ಓಡಾಡಲು ತೊಂದರೆ ಅನುಭವಿಸುವಂತಾಗಿದೆ. ಮಂಗಳೂರು ನಗರದ ಸೆಂಟ್ರಲ್‌ ರೈಲ್ವೆ ನಿಲ್ದಾಣದ ಆವರಣದಲ್ಲಿ ನೀರು ತುಂಬಿಕೊಂಡಿದ ಪರಿಣಾಮ ‌ಪ್ರಯಾಣಿಕರು ಸಂಕಷ್ಟ ಎದುರಿಸುವಂತ ಪರಿಸ್ಥಿತಿ ನಿರ್ಮಾಣವಾಗಿತ್ತು. ರೈಲ್ವೆ ನಿಲ್ದಾಣದ ‌ಪಾರ್ಕಿಂಗ್‌ ಸ್ಥಳವು ಸಂಪೂರ್ಣ ಜಲಾವೃತಗೊಂಡಿದೆ.

ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜುಲೈ 29ರವರೆಗೂ ಧಾರಾಕಾರ ವರ್ಷಧಾರೆ ಆಗಲಿದೆ. ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿ ಸಾಧಾರಣ ಮಳೆ ಮುಂದುವರಿಯಲಿದೆ.

Facebook Comments

comments