LATEST NEWS
ಇನ್ನೂ 5 ದಿನ ರಾಜ್ಯದಲ್ಲಿ ಮಳೆ ಅಬ್ಬರ – ಇಂದು ನಾಳೆ ಕರಾವಳಿಯಲ್ಲಿ ಯಲ್ಲೋ ಅಲರ್ಟ್
ಮಂಗಳೂರು ಜುಲೈ 25: ರಾಜ್ಯದಲ್ಲಿ ಮುಂಗಾರು ಮಳೆ ಆರ್ಭಟ ಮುಂದುವರೆದಿದ್ದು, ಇನ್ನೂ 5 ದಿನಗಳ ಮಳೆ ಅಬ್ಬರ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹವಾಮಾನ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿರುವ ಪ್ರಕಾರ, ರಾಜ್ಯದಲ್ಲಿ ಮುಂಗಾರು ಮಳೆ ಪ್ರಾರಂಭವಾದಾಗಿನಿಂದ 501.6 ಮಿ.ಮೀ ಮಳೆ ಸುರಿದಿದೆ ಎಂದು ತಿಳಿದುಬಂದಿದೆ. ಪ್ರತೀ ವರ್ಷ ಸಾಮಾನ್ಯವಾಗಿ 403.8 ಮಿ.ಮೀ ಮಳೆಯಾಗುತ್ತಿತ್ತು. ಈ ಬಾರಿ ಹೆಚ್ಚುವರಿ ಶೇ.24ರಷ್ಟು ಮಳೆಯಾಗಿದೆ.
ಇಂದು ಮತ್ತು ನಾಳೆ (ಜುಲೈ 25 ಮತ್ತು 26)ರಂದು ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುಂದಿನ 4-5 ದಿನಗಳಲ್ಲಿ ರಾಜ್ಯದಲ್ಲಿ ಮುಂಗಾರು ಮಳೆಯ ತೀವ್ರತೆ ಕಡಿಮೆಯಾಗಲಿದ್ದು, ಮಳೆರಾಯ ಕೊಂಚ ವಿರಾಮ ಕೊಡಲಿದ್ದಾನೆ ಎಂದು ಭಾರತೀಯ ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್.ಪಾಟೀಲ್ ಹೇಳಿದ್ದಾರೆ.
ಮುಂದಿನ 24 ಗಂಟೆ ಅರಬ್ಬೀ ಸಮುದ್ರದಲ್ಲಿ 3.7 ಮೀಟರ್ ಎತ್ತರದ ಅಲೆಗಳು ದಡಕ್ಕೆ ಅಪ್ಪಲಿಸಲಿವೆ. ಗಾಳಿ ತೀವ್ರತೆ ಕೂಡ ಹೆಚ್ಚಾಗಿರಲಿದ್ದು, ಗಂಟೆಗೆ 40-520 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ತಿಳಿಸಿದ್ದಾರೆ.