DAKSHINA KANNADA
ಭಾರೀ ಮಳೆ ಕುಕ್ಕೆ ಸುಬ್ರಹ್ಮಣ್ಯ ಸ್ನಾನಘಟ್ಟ ಸಂಪೂರ್ಣ ಮುಳುಗಡೆ

ಕುಕ್ಕೆ ಸುಬ್ರಹ್ಮಣ್ಯ ಜೂನ್ 26: ಘಟ್ಟಪ್ರದೇಶ ಹಾಗೂ ಸುಬ್ರಹ್ಮಣ್ಯ ಭಾಗದಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದೆ.
ಘಟ್ಟಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನಲೆ ಕುಮಾರಧಾರ ನದಿ ತುಂಬಿ ಹರಿಯುತ್ತಿದೆ. ಕುಕ್ಕೆ ಸುಬ್ರಹ್ಮಣ್ಯ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದೆ. ಮಂಜೇಶ್ವರ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿವರೆಗೂ ಬಂದ ಪ್ರವಾಹದ ನೀರು ಬಂದಿದೆ. ಕುಮಾರಧಾರಾ ನದಿಯಲ್ಲಿ ನೀರಿನ ಹರಿವು ಹೆಚ್ಚಾಗುತ್ತಲೇ ಇದೆ. ಈಗಾಗಲೇ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ನದಿ ಪಾತ್ರಕ್ಕೆ ಇಳಿಯದಂತೆ ಭಕ್ತಾದಿಗಳಿಗೆ ಸೂಚನೆ ನೀಡಿದೆ.
