LATEST NEWS
ಮುಂದಿನ ಎರಡು ದಿನಗಳ ಕಾಲ ಕರಾವಳಿಯಲ್ಲಿ ಮಳೆ ಸಾಧ್ಯತೆ
ಮಂಗಳೂರು ಅಗಸ್ಟ್ 18: ಮಳೆಯ ಅಭಾವದಿಂದ ಕಂಗೆಟ್ಟಿದ್ದ ಜನರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ರಾಜ್ಯದ ಕರಾವಳಿ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಹಾಗೂ ಒಳನಾಡು ವ್ಯಾಪ್ತಿಯ ಅಲ್ಲಲ್ಲಿ ಶನಿವಾರ, ಭಾನುವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಳೆದ ಕೆಲವು ದಿನಗಳಿಂದ ಬಿಡುವು ನೀಡಿದ್ದ ಮಳೆಯು ಅಲ್ಲಲ್ಲಿ ರಭಸದಿಂದ ಸುರಿಯುವ ಸಾಧ್ಯತೆಯಿದೆ ಎಂದು ಐಎಂಡಿ ಸೂಚನೆ ನೀಡಿದೆ. ಇಂದು ಸಂಜೆ ಮಂಗಳೂರಿನ ನಗರದ ಹಲವು ಕಡೆಗಳಲ್ಲಿ ಮಳೆಯಾಗಿದೆ.
ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಸ್ಥಳದಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆಯಿದ್ದು, ಉಷ್ಣಾಂಶವು ಗರಿಷ್ಠ 29 ಹಾಗೂ ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ತಿಳಿಸಿದೆ.
You must be logged in to post a comment Login