LATEST NEWS
ಅಗಸ್ಟ್ 6 ವರೆಗೆ ಕರಾವಳಿಯಲ್ಲಿ ಬಿರುಗಾಳಿ ಸಹಿತ ಮಳೆ ಸಾಧ್ಯತೆ – ಹವಾಮಾನ ಇಲಾಖೆ
ಬೆಂಗಳೂರು ಅಗಸ್ಟ್ 02: ಮುಂಗಾರು ಮಳೆ ಅಬ್ಬರ ಮುಂದುವರೆಯುತ್ತಿದ್ದಂತೆ ಇದೀಗ ಕರಾವಳಿ ಸೇರಿ ರಾಜ್ಯದ ವಿವಿಧೆಡೆ ಇದೇ 6ರವರೆಗೆ ಗಾಳಿ ಸಹಿತ ಭಾರಿ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಿಗೆ ಅರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿನ ಕೆಲ ಸ್ಥಳಗಳಲ್ಲಿ ನಿರಂತರ ಗಾಳಿ ಸಹಿತ ಧಾರಾಕಾರ ಮಳೆಯಾಗುವ ಸಂಭವವಿದೆ ಎಂದು ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಕರಾವಳಿ ಉದ್ದಕ್ಕೂ ಬಿರುಗಾಳಿಯಿಂದ ಕೂಡಿದ ಹವಾಮಾನ ಇರಲಿದೆ. ಗಂಟೆಗೆ 35ರಿಂದ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಆದ್ದರಿಂದ, ಮೀನುಗಾರರು ಎಚ್ಚರಿಕೆ ವಹಿಸಬೇಕು ಎಂದು ಇಲಾಖೆ ತಿಳಿಸಿದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಒಂದೆರಡು ಸ್ಥಳಗಳಲ್ಲಿ ಇದೇ 6 ರವರೆಗೂ ಭಾರಿ ಮಳೆ ಮುಂದುವರಿಯಲಿದೆ. ಒಳನಾಡಿನ ಉಳಿದ ಜಿಲ್ಲೆಗಳ ಬಹುತೇಕ ಸ್ಥಳಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.
You must be logged in to post a comment Login