Connect with us

LATEST NEWS

ಕರಾವಳಿಯಲ್ಲಿ ಇನ್ನೂ ನಾಲ್ಕು ದಿನ ಭಾರೀ ಗಾಳಿ ಮಳೆ ಸಾಧ್ಯತೆ….!!

ಮಂಗಳೂರು, ಜು.4: ದ.ಕ. ಜಿಲ್ಲೆಯಲ್ಲಿ ಮಳೆಯಬ್ಬರ ಇಂದು ಮುಂದುವರಿದಿದ್ದು, ಬೆಳಿಗ್ಗೆಯಿಂದಲೇ ಮತ್ತೆ ಧಾರಾಕಾರ ಮಳೆ ಪ್ರಾರಂಭವಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಇನ್ನು ನಾಲ್ಕು ದಿನ ಭಾರಿ ಗಾಳಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.


ಮಂಗಳೂರು ನಗರ, ಹೊರವಲಯ, ಬೆಳ್ತಂಗಡಿ, ಸುಬ್ರಹ್ಮಣ್ಯ, ಸುಳ್ಯ, ಬಂಟ್ವಾಳ, ವಿಟ್ಲ, ಮೂಡುಬಿದಿರೆ ಸೇರಿದಂತೆ ಜಿಲ್ಲಾದ್ಯಂತ ಮಳೆ ಸುರಿದಿದೆ. ಕೆಲವಡೆ ಗಾಳಿಯ ಅಬ್ಬರವೂ ಹೆಚ್ಚಿತ್ತು. ಹವಾಮಾನ ಇಲಾಖೆ ಕರಾವಳಿಗೆ ಆರೆಂಜ್ ಅಲರ್ಟ್ ಫೋಷಿಸಿದ್ದು, ಜುಲೈ 7ರ ವರೆಗೂ ಉತ್ತಮ ಮಳೆಯಾಗುವ ಸಾಧ್ಯತೆಯಿದೆ. ಜಿಲ್ಲೆಯ ಬಹುತೇಕ ಎಲ್ಲಾ ನದಿಗಳಲ್ಲಿ ನೀರಿನ ಪ್ರಮಾಣ ಏರಿಕೆಯಾಗಿದ್ದು, ನದಿ ತಟದಲ್ಲಿರುವವರಿಗೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.

Facebook Comments

comments