Connect with us

    LATEST NEWS

    ಮುಂದಿನ 10 ದಿನಗಳಲ್ಲಿ ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ…!!

    ಮಂಗಳೂರು ಜೂನ್ 29: ಕರಾವಳಿಯಲ್ಲಿ ಮುಂಗಾರು ಮಳೆ ಬಿರುಸುಗೊಂಡಿದ್ದು, ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದೆ. ಈ ನಡುವೆ ಮುಂದಿನ 10 ದಿನಗಳ ಕಾಲ ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದೆ.


    ಮಂಗಳೂರಿನಲ್ಲಿ ಇಂದು ಬೆಳಿಗ್ಗೆಯಿಂದಲೇ ಮಳೆ ಪ್ರಾರಂಭವಾಗಿದ್ದು, ಬಿಟ್ಟು ಬಿಟ್ಟು ಸಾಧಾರಣ ಮಳೆಯಾಗುತ್ತಿದೆ. ಇನ್ನು ಉಡುಪಿ ಜಿಲ್ಲೆಯಲ್ಲಿ ಬುಧವಾರ ಕೆಲವೆಡೆ ಉತ್ತಮ ಮಳೆಯಾಗಿದ್ದು, ಕಾಪು, ಹೆಬ್ರಿ ಭಾಗದಲ್ಲಿ ಹೆಚ್ಚು ಮಳೆಯಾಗಿದೆ. ಶಂಕರನಾರಾಯಣ, ಕಾಪು, ಬೆಳ್ಮಣ್‌, ಅಜೆಕಾರು, ಕುಂದಾಪುರ, ಪರ್ಕಳ, ಸಿದ್ದಾಪುರ, ಪಡುಬಿದ್ರಿ, ಬೈಂದೂರು, ಮಲ್ಪೆ, ಮಣಿಪಾಲ ಭಾಗದಲ್ಲಿ ಬಿಟ್ಟುಬಿಟ್ಟು ಮಳೆ ಸುರಿದಿದೆ.

    ಮುಂಗಾರು ಬಿರುಸು ಪಡೆಯುವ ಸಾಧ್ಯತೆ ಇದ್ದು, ಮುಂದಿನ ಹತ್ತು ದಿನಗಳ ಕಾಲ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಮಲೆನಾಡಿನ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ಮುನ್ನೆಚ್ಚರಿಕೆ ನೀಡಿದೆ.

    ಜುಲೈ 2ರಿಂದ ಮಳೆ ಮತ್ತಷ್ಟು ಬಿರುಸು ಪಡೆಯುವ ನಿರೀಕ್ಷೆ ಇದೆ. ಕರಾವಳಿಯಲ್ಲಿ 40ರಿಂದ 45 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಸಾರ್ವಜನಿಕರು ಸಮುದ್ರಕ್ಕೆ ಇಳಿಯಬಾರದು. ತಗ್ಗು ಪ್ರದೇಶದ ಜನರನ್ನು ಸ್ಥಳಾಂತರಿಸಬೇಕಾದ ಆವಶ್ಯಕತೆಯನ್ನು ಕೆಎಸ್‌ಎನ್‌ಡಿಎಂಸಿ ತಿಳಿಸಿದೆ.

    Share Information
    Advertisement
    Click to comment

    You must be logged in to post a comment Login

    Leave a Reply