BANTWAL
ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮುಂದುವರೆದ ಮಳೆ – ಬಂಟ್ವಾಳ ತಾಲೂಕಿನ ಶಾಲೆ ಕಾಲೇಜುಗಳಿಗೆ ಇಂದು(ಜುಲೈ 4) ರಜೆ

ಬಂಟ್ವಾಳ ಜುಲೈ 04: ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದೆ. ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ಬಿಟ್ಟು ಬಿಟ್ಟು ಮಳೆ ಬರುತ್ತಿದ್ದರೆ. ಇನ್ನು ಕೆಲವು ತಾಲೂಕುಗಳಲ್ಲಿ ನಿರಂತರ ಮಳೆಯಾಗುತ್ತಿದೆ.
ಬಂಟ್ವಾಳ ತಾಲ್ಲೂಕಿನಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ಈ ತಾಲ್ಲೂಕಿನ ಎಲ್ಲ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಇಂದು( ಜುಲೈ 4) ರಜೆ ಘೋಷಿಸಲಾಗಿದೆ ಬಂಟ್ವಾಳ ತಹಶೀಲ್ದಾರರು ತಿಳಿಸಿದ್ದಾರೆ.
