LATEST NEWS
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ : ಕರಾವಳಿಯಲ್ಲಿ ಭಾರಿ ಮಳೆ
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ : ಕರಾವಳಿಯಲ್ಲಿ ಭಾರಿ ಮಳೆ
ಮಂಗಳೂರು,ಮಾರ್ಚ್ 14 : ಕರಾವಳಿಯಲ್ಲಿ ಬಿರು ಬೇಸಿಗೆಯ ಬಿಸಿ ಏರುತಿದ್ದಂತೇ ವರುಣ ಪ್ರತ್ಯಕ್ಷನಾಗಿದ್ದಾನೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ಕರಾವಳಿ ಸೇರಿದಂತೆ ರಾಜ್ಯದ ಅನೇಕ ಕಡೆ ಮಳೆಯಾಗುತ್ತಿದೆ.
ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಂದು ಮಳೆ ಸುರಿಯುತ್ತಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಬೆಳ್ತಂಗಡಿ, ಬಂಟ್ವಾಳ, ಪುತ್ತೂರು, ಮೂಡಬಿದ್ರೆ, ಮಂಗಳೂರಿನ ಮುಡಿಪು, ಮೂಡಬಿದಿರೆಯ ಅನೇಕ ಭಾಗಗಳಲ್ಲಿ ಮಳೆ ಸುರಿಯುತ್ತಿದೆ. ಅನೇಕ ಕಡೆಗಳಲ್ಲಿ ಗುಡುಗು – ಮಿಂಚಿನಿಂದ ಕೂಡಿದ ಮಳೆಯಾಗುತ್ತಿದೆ. ಮಂಗಳೂರು ನಗರದಲ್ಲೂ ಸಾಧಾರಣ ಪ್ರಮಾಣದಲ್ಲಿ ಮಳೆ ಸುರಿದಿದೆ. ತಮಿಳುನಾಡು, ಕೇರಳ ಮತ್ತು ಕರ್ನಾಟಕದ ಕರಾವಳಿ ಭಾಗಗಳಲ್ಲಿ ಮಳೆ ಸುರಿಯುತ್ತಿದೆ. ಅರಬ್ಬಿ ಸಮುದ್ರದಲ್ಲಿ ಭಾರಿ ಪ್ರಮಾಣದ ಅಲೆಗಳು ಏಳುತ್ತಿರುವ ಮತ್ತು ಸಮುದ್ರ ಪ್ರಕ್ಷುಬ್ದಗೊಂಡಿರುವ ಹಿನ್ನೆಲೆಯಲ್ಲಿ ಮೀನುಗಾರರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಸೂಚಿಸಿದೆ.
You must be logged in to post a comment Login