LATEST NEWS
ಕರಾವಳಿ ಜಿಲ್ಲೆಗಳಲ್ಲಿ ಮೂರು ದಿನ ಭಾರಿ ಮಳೆ – ರೆಡ್ ಅಲರ್ಟ್ ಘೋಷಣೆ
ಬೆಂಗಳೂರು ಜುಲೈ10: ಕರಾವಳಿ ಜಿಲ್ಲೆಯಲ್ಲಿ ಜುಲೈ 11 ರಿಂದ 13 ರವರೆಗೆ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಮೂರೂ ದಿನ ರೆಡ್ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಜಿಲ್ಲೆಗಳಲ್ಲಿ ಶನಿವಾರವೂ ಹೆಚ್ಚು ಮಳೆಯಾಗಲಿದೆ. ಈ ಭಾಗದಲ್ಲಿ ಗಂಟೆಗೆ ಗರಿಷ್ಠ 60 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಎಚ್ಚರಿಸಿದೆ.
You must be logged in to post a comment Login