Connect with us

    LATEST NEWS

    ಇನ್ನೂ ಮೂರು ದಿನ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ….!!

    ಮಂಗಳೂರು ನವೆಂಬರ್ 14: ಮುಂಗಾರು ಮಳೆಯ ಸೀಸನ್ ಮುಗಿದರೂ ಕೂಡ ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಇದೀಗ ಮತ್ತೆ ಕೆಲ ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


    ಥಾಯ್ಲೆಂಡ್‌ ಮತ್ತು ದಕ್ಷಿಣ ಅಂಡಮಾನ್ ಸಮುದ್ರದಲ್ಲಿ ಶನಿವಾರ ಬೆಳಿಗ್ಗೆ ಕಡಿಮೆ ಒತ್ತಡದ ಪ್ರದೇಶ ಸೃಷ್ಟಿಯಾಗಿದೆ. ಮುಂದಿನ ದಿನಗಳಲ್ಲಿ ಅದು ಪ್ರಬಲವಾಗಿ, ನವೆಂಬರ್‌ 18ರಂದು ಆಂಧ್ರ ಪ್ರದೇಶವನ್ನು ಅಪ್ಪಳಿಸುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.


    ಇನ್ನು ನವೆಂಬರ್ 17ರ ವೇಳೆಗೆ ಪಶ್ಚಿಮ-ಮಧ್ಯ ಬಂಗಾಳ ಕೊಲ್ಲಿಯ ಮೇಲೆ ವಾಯುಭಾರ ಕುಸಿತವಾಗಿ ರೂಪಾಂತರಗೊಳ್ಳಲಿರುವ ಕಡಿಮೆ ಒತ್ತಡ ಪ್ರದೇಶವು, ನವೆಂಬರ್ 18ರಂದು ದಕ್ಷಿಣ ಆಂಧ್ರಪ್ರದೇಶದ ಕರಾವಳಿಗೆ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ವಾಯಭಾರ ಕುಸಿತದ ಪರಿಣಾಮ 17 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ವರದಿ ಹೇಳಿದೆ.


    ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು, ರಾಮನಗರ, ಬೆಂಗಳೂರು, ಶಿವಮೊಗ್ಗ, ಚಾಮರಾಜನಗರ, ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಯಲ್ಲಿ ಇಂದಿನಿಂದ ಇದೇ ನವೆಂಬರ್ 16 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.

    Share Information
    Advertisement
    Click to comment

    You must be logged in to post a comment Login

    Leave a Reply