Connect with us

    DAKSHINA KANNADA

    ಘಟ್ಟ ಪ್ರದೇಶಗಳಲ್ಲಿ ಸುರಿಯುತ್ತಿರುವ ಭಾರೀ ಮಳೆ – ಪುತ್ತೂರು-ಸುಬ್ರಹ್ಮಣ್ಯ ರಸ್ತೆ ಬಂದ್

    ಪುತ್ತೂರು ಜುಲೈ 19: ಕರಾವಳಿ ಮಲೆನಾಡು ಘಟ್ಟಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವು ರಸ್ತೆಗಳು ಸಂಪರ್ಕ ಕಳೆದುಕೊಂಡಿದೆ. ಇದೀಗ ಕುಮಾರಧಾರ ನದಿ ಉಕ್ಕಿ ಹರಿಯುತ್ತಿದ್ದು, ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟದ ಬಳಿ ರಸ್ತೆಗೆ ನದಿ ನೀರು ನುಗ್ಗಿದೆ.


    ದಕ್ಷಿಣಕನ್ನಡ ಜಿಲ್ಲೆ ಸೇರಿದಂತೆ ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದೆ. ಈ ಹಿನ್ನಲೆ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಸಂಪೂರ್ಣ ಮುಳುಗುಡೆಯಾಗಿದೆ. ಕಳೆದ ಐದು ದಿನಗಳಿಂದ ನಿರಂತರವಾಗಿ ಕುಮಾರಧಾರಾ ಸ್ನಾನಘಟ್ಟ ಮುಳುಗಡೆಯಾಗಿದೆ.

    ಇದೀಗ ನೀರು ಮತ್ತಷ್ಟು ಏರಿಕೆಯಾಗಿದ್ದು, ಇದರಿಂದಾಗಿ ಮಂಜೇಶ್ವರ-ಪುತ್ತೂರು-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮೇಲೆ ನೀರು ಹರಿಯಲಾರಂಭಿಸಿದ್ದು, ಪುತ್ತೂರು-ಸುಬ್ರಹ್ಮಣ್ಯ ರಸ್ತೆ ಬಂದ್ ಆಗಿದೆ. ಅಲ್ಲದೆ ನದಿ ಪಾತ್ರದ ಕೃಷಿತೋಟಗಳಿಗೂ ನೀರು ನುಗ್ಗಿದೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *