ದಕ್ಷಿಣಕನ್ನಡ ಜಿಲ್ಲೆಯ ಹಲವೆಡೆ ಭಾರಿ ಮಳೆ

ಪುತ್ತೂರು ಎಪ್ರಿಲ್ 8: ಬಿಸಿಲಿನ ಬೇಗೆಯಲ್ಲಿ ಬೆಂದಿದ್ದ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು ಮತ್ತೆ ಮಳೆಯಾಗಿದೆ. ಪುತ್ತೂರು, ಸುಳ್ಯ, ಬೆಳ್ತಂಗಡಿ ತಾಲೂಕಿನ ಹಲವೆಡೆಗಳಲ್ಲಿ ಇಂದೂ ಕೂಡಾ ಭಾರೀ ಹಾಗೂ ಸಾಧಾರಣ ಮಳೆಯಾಗಿದೆ.

ಸುಬ್ರಹ್ಮಣ್ಯ, ಸುಳ್ಯ ಹಾಗೂ ಪುತ್ತೂರು ಪರಿಸರದಲ್ಲಿ ನಿರಂತರ ಒಂದು ಗಂಟೆಗೂ ಅಧಿಕ ಸಮಯ ಮಳೆಯಾಗಿದೆ.ಕಳೆದ ಒಂದು ತಿಂಗಳಿನಿಂದ ಜಿಲ್ಲೆಯಲ್ಲಿ ಬಿಸಿಲಿನ ಝಳ ಹೆಚ್ಚಾಗಿದ್ದ ಹಿನ್ನಲೆಯಲ್ಲಿ ಈ ಭಾಗದ ಜನ ಬಳಲಿದ್ದರು. ಕಳೆದ ಒಂದು ವಾರದಿಂದ ಜಿಲ್ಲೆಯ ಹಲವೆಡೆ ಮಳೆಯಾಗುತ್ತಿರುವ ಕಾರಣ ಜಿಲ್ಲೆಯ ತಾಪಮಾನದಲ್ಲೂ ಕೊಂಚ ಇಳಿಮುಖವಾಗಿದೆ.