DAKSHINA KANNADA
ಸುಳ್ಯ ತಾಲೂಕಿನ ಹಲವೆಡೆ ಸುರಿದ ಭಾರೀ ಮಳೆ

ಸುಳ್ಯ ಎಪ್ರಿಲ್ 02: ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದ ಬೆನ್ನಲ್ಲೇ ಸುಳ್ಯದಲ್ಲಿ ಭಾರೀ ಮಳೆಯಾಗಿದೆ.
ಸುಳ್ಯ, ಪುತ್ತೂರು ತಾಲೂಕಿನಾದ್ಯಂತ ಬೆಳಗಿನಿಂದಲೇ ಮೋಡ ಕವಿದ ವಾತಾವರಣವಿತ್ತು. ಸುಳ್ಯದ ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ ಎಂದು ವರದಿಯಾಗಿದೆ. ಪುತ್ತೂರು ತಾಲೂಕಿನಲ್ಲೂ ತುಂತುರು ಮಳೆಯಾಗಿದ್ದು, ಬಿಸಿಲಿಗೆ ಬೆಂದಿದ್ದ ಜನರಿಗೆ ಮಳೆರಾಯ ತಂಪೆರೆದಿದ್ದಾನೆ. ಮೋಡ ಕವಿದ ವಾತಾವರಣದಿಂದ ಸುಳ್ಯ, ಪುತ್ತೂರು, ಬೆಳ್ತಂಗಡಿ ತಾಲೂಕಿನಲ್ಲಿ ಬಿಸಿಲಿನ ತಾಪಮಾನ ಸ್ವಲ್ಪ ಮಟ್ಟಿಗೆ ಕಮ್ಮಿಯಾಗಿದೆ.

ಹವಮಾನ ಇಲಾಖೆ ಮುಂದಿನ ಎರಡು ಮೂರು ದಿನಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.