Connect with us

    UDUPI

    ನಿಸರ್ಗ ಚಂಡಮಾರುತ ಪ್ರಭಾವ ಕರಾವಳಿಯಲ್ಲಿ ಮುಂದುವರೆದ ಮಳೆ

    ನಿಸರ್ಗ ಚಂಡಮಾರುತ ಪ್ರಭಾವ ಕರಾವಳಿಯಲ್ಲಿ ಮುಂದುವರೆದ ಮಳೆ

    ಉಡುಪಿ ಜೂನ್ 03: ನಿಸರ್ಗ ಚಂಡಮಾರುತದ ಪ್ರಭಾವದಿಂದ ಕರಾವಳಿಯಲ್ಲಿ ಕಳೆದೆರಡು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಇಂದು ಕೂಡ ಬೆಳಿಗ್ಗೆಯಿಂದಲೇ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯ ಅಲ್ಲಲ್ಲಿ ಮಳೆಯಾಗಿದೆ.

    ಉಡುಪಿ ಜಿಲ್ಲೆಯಲ್ಲಿ ಇಂದು ಮುಂಜಾನೆಯಿಂದ ಮೋಡ ಕವಿದ ವಾತಾವರಣವಿದ್ದು ಜಿಲ್ಲೆಯ ಕೆಲವು ಭಾಗಗಳಲ್ಲಿ ಮುಂಜಾನೆಯಿಂದಲೇ ಮಳೆ ಪ್ರಾರಂಭಾಗಿದೆ. ಇನ್ನು ನಿಸರ್ಗ ಚಂಡಮಾರುತದ ಪ್ರಭಾವದಿಂದ ಇಂದು ಸಂಜೆಯೊಳಗೆ ಮತ್ತೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಆರಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

    ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ಧ ಸ್ಥಿತಿ ನಿರ್ಮಾಣವಾಗಿದ್ದು, ರಕ್ಕಸ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸುತ್ತಿವೆ. ಮುಂದಿನ 48 ಗಂಟೆಗಳಲ್ಲಿ ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

    ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಮಂಗಳವಾರ ಬಿರುಗಾಳಿ ಸಹಿತ ಭಾರೀ ಮಳೆಯಾಗಿದೆ. ಭಟ್ಕಳ, ಹೊನ್ನಾವರ, ಕುಮಟಾ, ಕಾರವಾರದಲ್ಲಿ ಬೆಳಿಗ್ಗೆಯಿಂದಲೇ ಬಿರುಗಾಳಿ ಸಹಿತ ಭಾರೀ ಮಳೆಯಾಗುತ್ತಿದೆ. 50-60 ಕಿಮೀ  ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಗಳಿದ್ದು, 2.6ರಿಂದ 3.8 ಕಿಮೀ ಎತ್ತರದವರೆಗೆ ಅಲೆಗಳು ಏಳುವ ನಿರೀಕ್ಷೆಗಳಿವೆ ಎಂದು ಹವಾಮಾನ ಇಲಾಕೆ ತಿಳಿಸಿದೆ.

    ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಬೆಳಗ್ಗಿನಿಂದಲೇ ಇಡೀ ದಿನ ನಿರಂತರ ತುಂತುರು ಮಳೆಯಾಗಿದೆ. ಜಿಲ್ಲೆಯ ಪುತ್ತೂರು, ಬೆಳ್ತಂಗಡಿ ಮತ್ತು ಸುಳ್ಯ ಭಾಗಗಳಲ್ಲಿ ನದಿಗಳ ಹರಿವು ಹೆಚ್ಚಲವಾಗಿದೆ. ನೇತ್ರಾವತಿ, ಕುಮಾರಧಾರ ನದಿಗಳಲ್ಲಿ ನೀರಿನ ಪ್ರಮಾಣದಲ್ಲಿ ಅಲ್ಪಪ್ರಮಾಣದಲ್ಲಿ ಹೆಚ್ಚಳವಾಗಿದೆ. ಇನ್ನು ಕೊಡಗಿನಲ್ಲೂ ಸಾಧಾರಣ ಮಳೆಯಾಗಿದೆ.

     

    Share Information
    Advertisement
    Click to comment

    You must be logged in to post a comment Login

    Leave a Reply