LATEST NEWS
ವಾಯುಭಾರ ಕುಸಿತ – ಉಡುಪಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಳೆ ಅಬ್ಬರ

ಉಡಪಿ/ ಮಂಗಳೂರು ಮೇ 20: ಮುಂಗಾರು ಪೂರ್ವ ಮಳೆ ಅಬ್ಬರ ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಜೋರಾಗಿದ್ದು, ಮಳೆ ಅಬ್ಬರಕ್ಕೆ ಇಂದು ಮತ್ತು ನಾಳೆ ಹವಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.
ಮಂಗಳೂರಿನಲ್ಲಿ ನಿನ್ನೆ ರಾತ್ರಿಯಿಂದಲೇ ಮಳೆ ಪ್ರಾರಂಭವಾಗಿದ್ದು, ಮುಂಜಾನೆ ಕೂಡ ಉತ್ತಮ ಮಳೆಯಾಗಿದೆ. ಮೋಡ ಕವಿದ ವಾತಾವರಣವಿದ್ದು ತುಂತುರು ಮಳೆಯಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಉತ್ತಮ ಮಳೆಯಾದ ಬಗ್ಗೆ ವರದಿಯಾಗಿದೆ.
ಸಮುದ್ರಕ್ಕೆ ಮೀನುಗಾರಿಕೆಗೆ ತೆರಳದಂತೆ ಮೀನುಗಾರರಿಗೆ ಸೂಚಿಸಲಾಗಿತ್ತು. ವಿಪರೀತ ಮಳೆಯ ಹಿನ್ನೆಲೆಯಲ್ಲಿ ಅನೇಕ ಕಡೆಗಳಲ್ಲಿ ರಸ್ತೆ ಮಧ್ಯದಲ್ಲಿ ನೀರು ತುಂಬಿಕೊಂಡಿತ್ತು. ಕೃತಕ ನೆರೆಯ ಛಾಯೆ ಕಂಡು ಬಂದಿತ್ತು.

ಇನ್ನು ಉಡುಪಿಯಲ್ಲೂ ಮಳೆ ಅಬ್ಬರ ಜೋರಾಗಿಯೇ ಇದೆ. ಉಡುಪಿಯಲ್ಲಿ ಕಳೆದ ಮೂರು ಗಂಟೆಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಉಡುಪಿ ಮಣಿಪಾಲ ರಸ್ತೆಯ ತುಂಬೆಲ್ಲ ನೀರು ತುಂಬಿಕೊಂಡು ವಾಹನ ಸಂಚಾರಕ್ಕೆ ತೊಡಕುಂಟಾಗಿತ್ತು. ಮಣಿಪಾಲ ಸಮೀಪ ರಸ್ತೆ, ಐನೆಕ್ಸ್ ಬಳಿ ರಸ್ತೆ ಸಂಚಾರ ಅಸ್ತವ್ಯಸ್ತ ವಾಗಿದ್ದು, ರಸ್ತೆಯಲ್ಲಿ ನೀರು ಹರಿಯುತ್ತಿರುವುದರಿಂದ ಬ್ಲಾಕ್ ಆಗಿದ್ದು, ಬದಲಿ ರಸ್ತೆಯ ಮೂಲಕ ಮಣಿಪಾಲಕ್ಕೆ ಜನ ತೆರಳುತ್ತಿದ್ದಾರೆ.