LATEST NEWS
ಭಾರಿ ಮಳೆಯ ಆರ್ಭಟಕ್ಕೆ ತತ್ತರಿಸಿದ ಉಡುಪಿ
ಉಡುಪಿ: ನಿನ್ನೆಯಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ಉಡುಪಿ ನಗರ ಪ್ರದೇಶ ಜಲಾವೃತಗೊಂಡಿದ್ದು, ಉಡುಪಿಯ ತಗ್ಗುಪ್ರದೇಶಗಳು ಸಂಪೂರ್ಣ ಜಲಾವೃತವಾಗಿದೆ ಮಠದ ಕೆರೆ, ಬೈಲಕೆರೆ, ನಿಟ್ಟೂರು, ಕೊಡಂಕೂರು, ಚಿಪ್ಪಾಡಿ ಪ್ರದೇಶದಲ್ಲಿ ಕೃತಕ ನೆರೆ ಉಂಟಾಗಿದೆ .
ಸುಮಾರು ನಾಲ್ಕು ದಶಕಗಳ ಬಳಿಕ ಉಡುಪಿಯಲ್ಲಿ ಇದೇ ಮೊದಲ ಬಾರಿಗೆ ಈ ರೀತಿಯ ನೆರೆ ಸೃಷ್ಟಿಯಾಗಿದೆ. ತಗ್ಗು ಪ್ರದೇಶದಲ್ಲಿ ಸಿಕ್ಕಿಬಿದ್ದವರನ್ನು ದೋಣಿಯಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿಗಳು ರಕ್ಷಿಸಿದ್ದಾರೆ. ತಗ್ಗುಪ್ರದೇಶದಲ್ಲಿರುವ ಅಂಗಡಿ, ಗೋದಾಮುಗಳಿಗೆ ನೀರು ನುಗ್ಗಿ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ.
ಉಡುಪಿ ಕೃಷ್ಣ ಮಠದ ಪಾರ್ಕಿಂಗ್ ಅವರನ್ನ ಸಂಪೂರ್ಣ ಸಂಪೂರ್ಣವಾಗಿ ಜಲಾವೃತಗೊಂಡಿದ್ದು ಜಿಲ್ಲೆಯ ವಿವಿಧ ಕಡೆಗಳಲ್ಲಿ ಇದೇ ರೀತಿಯ ಕೃತಕ ನೆರೆ ಉಂಟಾಗಿದೆ.
Video: