DAKSHINA KANNADA
ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆ – ಕುಕ್ಕೆ ಸುಬ್ರಹ್ಮಣ್ಯ ಸ್ನಾನಘಟ್ಟ ಮುಳುಗಡೆ

ಕುಕ್ಕೆ ಸುಬ್ರಹ್ಮಣ್ಯ ಜುಲೈ 26: ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕುಮಾರಧಾರ ನದಿ ಮಟ್ಟದಲ್ಲಿ ಏರಿಕೆಯಾಗಿದ್ದು, ಕುಕ್ಕೆ ಸುಬ್ರಹ್ಮಣ್ಯ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದೆ.
ಕರಾವಳಿ ಮತ್ತು ಪಶ್ಟಿಮಘಟ್ಟದಲ್ಲಿ ಭಾರೀ ಮಳೆಯಾಗುತ್ತಿದೆ. ಕುಮಾರಧಾರ ನದಿ ನೀರಿನ ಮಟ್ಟದಲ್ಲಿ ಏರಿಕೆಯಾಗಿದ್ದು. ಪುತ್ತೂರು-ಸುಬ್ರಹ್ಮಣ್ಯ ರಸ್ತೆಯ ಕುಮಾರಧಾರಾ ಸ್ನಾನಘಟ್ಟದ ಬಳಿ ಹೆದ್ದಾರಿಗೆ ನೀರು ನುಗ್ಗಿದೆ.

ಈ ಹಿನ್ನಲೆ ಕೆಲ ಕಾಲ ವಾಹನಗಳ ಸಂಚಾರಕ್ಕೆ ಕೆಲಕಾಲ ಸ್ಥಗಿತಗೊಳಿಸಲಾಗಿತ್ತು. ಇನ್ನು ಕುಕ್ಕೆ ಸುಬ್ರಹ್ಮಣ್ಯ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದೆ.