Connect with us

    LATEST NEWS

    ಮುಂದುವರೆದ ಭಾರಿ ಮಳೆ ನಾಳೆ ( ಜುಲೈ 23) ದಕ್ಷಿಣಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ

    ಮುಂದುವರೆದ ಭಾರಿ ಮಳೆ ನಾಳೆ ( ಜುಲೈ 23) ದಕ್ಷಿಣಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ

    ಮಂಗಳೂರು, ಜುಲೈ 22: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರೆದಿರುವ ಹಿನ್ನಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಅಂಗನವಾಡಿ, ಸರಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆ-ಕಾಲೇಜುಗಳಿಗೆ (ಪಿಯುವರೆಗೆ) ನಾಳೆ ( ಜುಲೈ 23) ರಂದು ರಜೆ ಘೋಷಿಸಿ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶಿಸಿದ್ದಾರೆ.

    ಕರಾವಳಿಯಲ್ಲಿ ಕಳೆದ 4 ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆ ಇಂದು ಕೂಡ ಮುಂದುವರೆದಿದೆ. ಇಂದು ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮುಂಜಾನೆಯಿಂದಲೇ ಭಾರಿ ಮಳೆ ಸುರಿಯುತ್ತಿದೆ.

    ಅಲ್ಲದೆ ಭಾರತೀಯ ಹವಾಮಾನ ಇಲಾಖೆ ಕೂಡ ಕರಾವಳಿಯಲ್ಲಿ ನಾಳೆ ಭಾರಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ಕೂಡ ನೀಡಿದೆ. ಜುಲೈ 25 ರವರೆಗೆ ಪ್ರತಿದಿನ 200 ಮಿಲಿ ಮೀಟರ್ ಮಳೆಯಾಗುವ ಸಾಧ್ಯತೆಯಿದೆ. ಈಗಾಗಲೇ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

    ಈ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯ ಅಂಗನವಾಡಿ, ಸರಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆ-ಕಾಲೇಜುಗಳಿಗೆ (ಪಿಯುವರೆಗೆ) ನಾಳೆ ( ಜುಲೈ 23) ರಂದು ರಜೆ ಘೋಷಿಸಿ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶಿಸಿದ್ದಾರೆ.

    ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ, ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಮುಂಜಾಗ್ರತೆ ವಹಿಸಬೇಕು. ಮೀನುಗಾರಿಕೆಗೆ ಈ ದಿನದಂದು ಮೀನುಗಾರರು ತೆರಳಬಾರದು. ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರಬೇಕು.

    ಪ್ರವಾಸಿಗರು/ ಸಾರ್ವಜನಿಕರು ನದಿತೀರ, ಸಮುದ್ರ ತೀರಕ್ಕೆ ತೆರಳದಂತೆ ಎಚ್ಚರಿಕೆ ವಹಿಸಬೇಕು. ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆಗಳಿದ್ದಲ್ಲಿ ಜಿಲ್ಲಾಧಿಕಾರಿ ಕಚೇರಿಯ ಟೋಲ್‌ಫ್ರೀ ನಂ. 1077 ಅಥವಾ ವಾಟ್ಸ್‌ಆ್ಯಪ್ ನಂಬರ್ 9483908000ನ್ನು ಸಂಪರ್ಕಿಸಲು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply