LATEST NEWS
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದುವರೆದ ಮಳೆ ಬಿಜೈ ಸಮೀಪ ರಸ್ತೆಗೆ ಉರುಳಿಗ ಬಂಡೆ ಕಲ್ಲು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದುವರೆದ ಮಳೆ ಬಿಜೈ ಸಮೀಪ ರಸ್ತೆಗೆ ಉರುಳಿಗ ಬಂಡೆ ಕಲ್ಲು
ಮಂಗಳೂರು ಜುಲೈ 22: ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯಲ್ಲಿ ಮಳೆ ಅಬ್ಬರ ಇಂದು ಕೂಡ ಮುಂದುವರೆದಿದೆ. ಕರಾವಳಿಯಲ್ಲಿ ಜುಲೈ 24ರ ವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇರುವ ಹಿನ್ನಲೆಯಲ್ಲಿ ಹವಮಾನ ಇಲಾಖೆ ಕರಾವಳಿ ಕರ್ನಾಟಕದಲ್ಲಿ ಮತ್ತೆ ರೆಡ್ ಅಲರ್ಟ್ ಘೋಷಿಸಿದೆ.
ಮಂಗಳೂರು ನಗರದಲ್ಲೂ ಭಾರಿ ಮಳೆಯಾಗುತ್ತಿದ್ದು, ಮಳೆ ಅಬ್ಬರಕ್ಕೆ ಬಿಜೈ ಸಮೀಪದ ಬಟ್ಟಗುಡ್ಡದಲ್ಲಿ ಗುಡ್ಡ ಕುಸಿತ ಉಂಟಾಗಿದ್ದು, ಗುಡ್ಡದಿಂದ ಕಲ್ಲುಗಳು ರಸ್ತೆಗೆ ಬಿದ್ದು ಸಂಚಾರ ವ್ಯವಸ್ಥೆ ಅಸ್ತವ್ಯಸ್ಥವಾಗಿದೆ.

ಉಡುಪಿಯಲ್ಲಿ ಕಳೆದ ಮೂರು ದಿನಗಳಲ್ಲಿ 300 ಮಿಲಿಮೀಟರ್ ನಷ್ಟು ಮಳೆಯಾಗಿದೆ. ಮೊದಲೆರಡು ದಿನ 100 ಮಿಲಿ ಮೀಟರ್ ಮಳೆ ಬಿದ್ದಿದ್ದು, ಮೂರನೇ ದಿನವೂ ಚೆನ್ನಾಗಿ ಮಳೆಯಾಗಿದೆ. ಜಿಲ್ಲೆಯ ಕಾರ್ಕಳ ತಾಲೂಕಲ್ಲಿ 110 ಮಿಲಿ ಮೀಟರ್, ಕುಂದಾಪುರದಲ್ಲಿ 102 ಮಿಲಿಮೀಟರ್, ಉಡುಪಿಯಲ್ಲಿ 88 ಮಿಲಿಮೀಟರ್ ಮಳೆಯಾಗಿದೆ.