LATEST NEWS
ಭಾರಿ ಮಳೆಗ ಜಲಾವೃತವಾದ ಮಂಗಳೂರು ನಗರ

ಭಾರಿ ಮಳೆಗ ಜಲಾವೃತವಾದ ಮಂಗಳೂರು ನಗರ
ಮಂಗಳೂರು ಮೇ 29: ರಾತ್ರಿಯಿಂದ ಸುರಿಯುತ್ತಿರುವ ಮಳೆಗೆ ಮಂಗಳೂರು ನಗರ ಸಂಪೂರ್ಣ ಜಲಾವೃತವಾಗಿದೆ. ಮಂಗಳೂರು ನಗರ ಹೃದಯ ಭಾಗದ ಪ್ರಮುಖ ರಸ್ತೆಗಳಲ್ಲಿ ಸಂಪೂರ್ಣ ನೀರು ತುಂಬಿದ್ದು, ವಾಹನ ಸವಾರರು ಹರಸಾಹಸ ಪಡುತ್ತಿದ್ದಾರೆ. ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರಿ ಮಳೆಗೆ ಜಿಲ್ಲೆಯ ಜನ ಜೀವನ ಅಸ್ತವ್ಯಸ್ತವಾಗಿದೆ. ಇನ್ನು ನಗರದ ಹಲವೆಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ಜನರು ಪರದಾಡುವಂತಾಗಿದೆ.
ನಗರ ಹಲವು ಕಡೆ ಮಳೆ ನೀರು ನುಗ್ಗಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅಪಾರ ಹಾನಿಯುಂಟಾಗಿದೆ. ನಗರದ ಬಲ್ಲಾಳ ಬಾಗ್ ಪರಿಸರದಲ್ಲಿ ಚರಂಡಿ ಕಾಲುವೆ ತುಂಬಿದ್ದು ರಸ್ತೆ ಮೇಲೆ ನೀರು ಹರಿಯುತ್ತಿದೆ. ನಗರದ ಕೆ.ಎಸ್ ರಾವ್ ರಸ್ತೆಯ ಮೇಲೆ ನೀರು ಹರಿಯುತ್ತಿದ್ದು, ಸಂಚಾರಕ್ಕೆ ಅಡಚಣೆ ಉಂಟಾಗಿದೆ.
