LATEST NEWS
ಜೂನ್ 21 ರಿಂದ 23 ರವರೆಗೆ ಕರಾವಳಿಯಲ್ಲಿ ಭಾರೀ ಗಾಳಿ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್ ಘೋಷಣೆ
![](https://i0.wp.com/themangaloremirror.in/wp-content/uploads/2024/04/For-Advertisement-Please-Contact.jpg?fit=728%2C90&ssl=1)
ಮಂಗಳೂರು ಜೂನ್ 19: ಕರಾವಳಿಯಲ್ಲಿ ಕೆಲವು ದಿನಗಳಿಂದ ಕಣ್ಮರೆಯಾಗಿದ್ದ ಮಳೆ ಇದೀಗ ಮತ್ತೆ ಪ್ರಾರಂಭವಾಗುವ ಮುನ್ಸೂಚನೆ ದೊರೆತಿದ್ದು, ಜೂನ್ 21 ರಿಂದ 23ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ.
ಮುಂಗಾರು ಮಳೆ ಪ್ರಾರಂಭವಾದ ಬಳಿಕ ಕಳೆದ ಒಂದು ವಾರದಿಂದ ಮಳೆ ಕೊಂಚ ಕಡಿಮೆಯಾಗಿತ್ತು, ಇದೀಗ ಮಳೆ ಮತ್ತೆ ಪ್ರಾರಂಭವಾಗುವ ಸಾಧ್ಯತೆ ಇದ್ದು, ಜೂನ್ 21 ರಿಂದ 23 ರವರೆಗೆ ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಿಗೆ ಗುಡುಗು, ಮಿಂಚು, ಜೋರಾದ ಗಾಳಿಯೊಂದಿಗೆ ಅತಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಅರೆಂಜ್ ಅಲರ್ಟ್ ಘೋಷಣೆ ಮಾಡಿದೆ.
You must be logged in to post a comment Login