LATEST NEWS
ಭಾರೀ ಮಳೆ ರೆಡ್ ಅಲರ್ಟ್ ಹಿನ್ನಲೆ ಪ್ರವಾಸಿಗರು ಚಾರಣ, ನದಿ ತೀರ ಹೋಗದಂತೆ ಪ್ರವಾಸೋದ್ಯಮ ಇಲಾಖೆ ಸೂಚನೆ

ಮಂಗಳೂರು ಮೇ 27:- ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆಯಾಗಿದ್ದು, ವ್ಯಾಪಕ ಮಳೆಯಾಗುವ ಸಾಧ್ಯತೆಯಿರುತ್ತದೆ.
ಈ ನಿಟ್ಟಿನಲ್ಲಿ ಮುಂಜಾಗೃತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಪ್ರವಾಸಿಗರು/ಸಾರ್ವಜನಿಕರು ಗುಡ್ಡ ಪ್ರದೇಶದ ಚಾರಣಕ್ಕೆ, ನದಿ ತೀರಕ್ಕೆ, ಸಮುದ್ರ ತೀರಕ್ಕೆ ತೆರಳದಿರಲು ಸೂಚಿಸಿರುತ್ತದೆ. ಹಾಗಾಗಿ ಹೋಟೆಲ್/ರೆಸಾರ್ಟ್ /ಹೋಂ ಸ್ಟೇಗಳಲ್ಲಿ ತಂಗುವ ಪ್ರವಾಸಿಗರಿಗೆ ಗುಡ್ಡ ಪ್ರದೇಶದ ಚಾರಣಕ್ಕೆ, ನದಿ ತೀರಕ್ಕೆ ಹಾಗೂ ಸಮುದ್ರ ತೀರಕ್ಕೆ ತೆರಳದಂತೆ ತಿಳಿಸಿ ಮುಂಜಾಗ್ರತಾ ಕ್ರಮವಹಿಸಲು ಹೋಟೆಲ್/ರೆಸಾರ್ಟ್ /ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಾಗಿ ಸೂಚಿಸಲಾಗಿದೆ. ಅಹಿತಕರ ಘಟನೆಗಳು ಸಂಭವಿಸಿದಲ್ಲಿ ಮಾಲೀಕರೇ ನೇರ ಹೊಣೆಗಾರರಾಗುತ್ತಾರೆ. ನಿರ್ಲಕ್ಷಿಸಿದ್ದಲ್ಲಿ ನಿಯಮಾನುಸಾರ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

1 Comment