LATEST NEWS
ಕರಾವಳಿಯಲ್ಲಿ ಮುಂದುವರೆದ ಮಳೆ ಅಬ್ಬರ – ರೆಡ್ ಅಲರ್ಟ್

ಮಂಗಳೂರು ಜುಲೈ 24: ಕರ್ನಾಟಕದ ಕರಾವಳಿಯಲ್ಲಿ ಮಳೆ ಅಬ್ಬರ ಮುಂದುವರೆದಿದ್ದು ಇನ್ನೂ ಎರಡು ದಿನಗಳ ಕಾಲ ಬಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕ ಕರಾವಳಿಯಲ್ಲಿ ಮುಂಗಾರು ಮಳೆ ಅಬ್ಬರ ಜೋರಾಗಿಯೇ ಇದೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆ ಇನ್ನೂ ಬಿಡುವು ಪಡೆದಿಲ್ಲ. ಇನ್ನೂ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಈ ಹಿನ್ನೆಲೆಯಲ್ಲಿ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಅರಬ್ಬಿ ಸಮುದ್ರದಲ್ಲಿ ಗಾಳಿಯ ವೇಗ ತುಸು ಹೆಚ್ಚಳವಾಗಿರುವುದರಿಂದ ಕಡಲತೀರದ ನಿವಾಸಿಗಳಿಗೆ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ಜುಲೈ 26ರವರೆಗೆ ಮೀನುಗಾರರು ಸಮುದ್ರಕ್ಕೆ ತೆರಳದಂತೆ ಸೂಚಿಸಲಾಗಿದೆ.