ಭಾರಿ ಮಳೆ ಪುತ್ತೂರು ಸುಳ್ಯ ತಾಲೂಕಿನ ಎಲ್ಲಾ ಶಾಲೆ ಕಾಲೇಜುಗಳಿಗೆ ಇಂದು ರಜೆ

ಪುತ್ತೂರು ಜೂನ್ 14: ಪುತ್ತೂರು ಹಾಗೂ ಸುಳ್ಯ ಪರಿಸರದಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಪುತ್ತೂರು ಹಾಗೂ ಸುಳ್ಯ ತಾಲೂಕಿನ ಎಲ್ಲಾ ಶಾಲೆ ಕಾಲೇಜುಗಳಿಗ ಇಂದು ರಜೆ ಘೋಷಿಸಲಾಗಿದೆ.

ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆ ನಿನ್ನೆಯಿಂದ ಮತ್ತೆ ಚುರುಕು ಪಡೆದುಕೊಂಡಿದೆ. ಪುತ್ತೂರು ತಾಲೂಕಿನ ಪರಿಸರದಲ್ಲಿ ಸುರಿಯುತ್ತಿರುವ ಮಳೆ ಪ್ರಮಾಣ ಹೆಚ್ಚಾಗಿದ್ದರಿಂದ ಪುತ್ತೂರು ತಾಲೂಕಿನ ಎಲ್ಲಾ ಶಾಲೆ ಕಾಲೇಜುಗಳಿಗೆ ಇಂದು ರಜೆ ಘೋಷಿಸಿ ಪುತ್ತೂರು ಎಸಿ ಕೃಷ್ಣ ಮೂರ್ತಿ ಆದೇಶಿಸಿದ್ದಾರೆ.

ಈ ನಡುವೆ ಸುಳ್ಯ ತಾಲೂಕಿನಲ್ಲೂ ಭಾರಿ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದು ,ಸುಳ್ಯ ತಾಲ್ಲೂಕಿನ ಎಲ್ಲಾ ಶಾಲಾ,ಕಾಲೇಜುಗಳಿಗೆ ಸುಳ್ಯ ತಹಶೀಲ್ದಾರರು ಇಂದು ರಜೆ ಘೋಷಣೆ ಮಾಡಿದ್ದಾರೆ.

Facebook Comments

comments