LATEST NEWS
ನಿಲ್ಲದ ಮಳೆ – ನಾಳೆಯೂ( ಜುಲೈ 7) ಉಡುಪಿ ಮತ್ತು ದಕ್ಷಿಣಕನ್ನಡ ಜಿಲ್ಲೆಯಲ್ಲಿ ಶಾಲೆ ಕಾಲೇಜಿಗೆ ರಜೆ…!!
ಮಂಗಳೂರು, ಜುಲೈ 6: ಕರಾವಳಿಯಲ್ಲಿ ಮಳೆ ಅಬ್ಬರ ನಿಲ್ಲುವಂತೆ ಕಾಣುತ್ತಿಲ್ಲ, ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಜುಲೈ 7ರ ಬೆಳಗ್ಗೆ ವರೆಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಸೂಚನೆ ನೀಡಿರುವುದರಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತ ಮತ್ತು ಉಡುಪಿ ಜಿಲ್ಲಾಡಳಿತ ನಾಳೆ (ಜುಲೈ 7) ರಂದು ಶಾಲಾ ಕಾಲೇಜಿಗೆ ರಜೆ ಘೋಷಣೆ ಮಾಡಿದೆ.
ದಕ್ಷಿಣಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಆರ್ಭಟ ಮುಂದುವರಿದಿದ್ದು ಮುಂಜಾಗ್ರತೆ ಹಿನ್ನೆಲೆಯಲ್ಲಿ ಜು.7ರಂದು (ಶುಕ್ರವಾರ) ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆಗಳು, ಪ್ರೌಢಶಾಲೆ, ಪ.ಪೂ ಕಾಲೇಜುಗಳಿಗೆ ರಜೆ ಸಾರಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪ್ರಕಟಣೆ ತಿಳಿಸಿದೆ.
ಇದೇ ವೇಳೆ, ಉಡುಪಿ ಜಿಲ್ಲೆಯಲ್ಲಿಯೂ ಭಾರೀ ಮಳೆ ಮತ್ತು ರೆಡ್ ಅಲರ್ಟ್ ಹಿನ್ನೆಲೆಯಲ್ಲಿ ನಾಳೆ (ಜುಲೈ 7) ಸತತ ನಾಲ್ಕನೇ ದಿನ ಜಿಲ್ಲೆಯಾದ್ಯಂತ ಶಾಲೆ, ಕಾಲೇಜಿಗೆ ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿ ಕೂರ್ಮ ರಾವ್ ಈ ಬಗ್ಗೆ ಆದೇಶ ಹೊರಡಿಸಿದ್ದಾರೆ. ಗುರುವಾರ ಉಡುಪಿಯಲ್ಲಿ ಭಾರೀ ಮಳೆಯಾಗಿದ್ದು ತಗ್ಗಿನ ಪ್ರದೇಶಗಳಿಗೆ ಮಳೆ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ.
You must be logged in to post a comment Login