ಬೆಳ್ತಂಗಡಿ ಜೂನ್ 25: ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆ ಹಿನ್ನೆಲೆಯಲ್ಲಿ ಬೆಳ್ತಂಗಡಿ ತಾಲೂಕಿನ ಎಲ್ಲಾ ಅಂಗನವಾಡಿಗಳಿಗೆ ಹಾಗೂ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜೂನ್ 26ರ ಗುರುವಾರದಂದು ರಜೆ ನೀಡಿ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಆದೇಶ ಹೊರಡಿಸಿದ್ದಾರೆ.

1. ಬೆಳ್ತಂಗಡಿ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ದಿ:26-06-2025 ರಂದು ರಜೆಯನ್ನು ಘೋಷಿಲಾಗಿರುತ್ತದೆ.
2. ನೀರು ಇರುವ ತಗ್ಗು ಪ್ರದೇಶ, ಕೆರೆ ನದಿತೀರ, ತೋಡುಗಳಿಗೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸುವುದು.
3. ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಪಂಚಾಯತ್ ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರತಕ್ಕದ್ದು ಹಾಗೂ ವಿಪತ್ತು ನಿರ್ವಹಣೆಯನ್ನು ಚಾಚೂ ತಪ್ಪದೇ ಕಡ್ಡಾಯವಾಗಿ ನಿರ್ವಹಿಸುವುದು.
4. ತಾಲೂಕು ಆಡಳಿತದಿಂದ ಗ್ರಾಮ ಪಂಚಾಯತ್ ಮತ್ತು ವಾರ್ಡ್ ಗಳಲ್ಲಿ ನೇಮಿಸಲಾಗಿರುವ INCIDENT COMMANDER ಗಳು ಸದಾ ಜಾಗೃತರಾಗಿದ್ದು, ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸುವುದು ಮತ್ತು ತಾಲೂಕು ಕಚೇರಿಯ ನಿತಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವುದು.
5. ಪ್ರವಾಸಿಗರು/ಸಾರ್ವಜನಿಕರು ನದಿತೀರಕ್ಕೆ ತೋಡುಗಳ ಹತ್ತಿರ ತೆರಳದಂತೆ ಸೂಚಿಸಲಾಗಿದೆ.
6. ಸಂಬಂದಪಟ್ಟ ಇಲಾಖಾ ಅಧಿಕಾರಿಗಳು ಪ್ರತೀ ಗ್ರಾಮ ಪಂಚಾಯತ್ ಮಟ್ಟದಲ್ಲಿ ಕಾಳಜಿ ಕೇಂದ್ರವನ್ನು ತೆರೆದು ಸನ್ನದ್ಧ ಸ್ಥಿತಿಯಲ್ಲಿಸಿಕೊಳ್ಳುವುದು.

 

Share Information