KARNATAKA
ಬೆಂಗಳೂರು – ಮಳೆಗೆ ಜಲಾವೃತಗೊಂಡ ಅಂಡರ್ ಪಾಸ್ ನಲ್ಲಿ ಸಿಲುಕಿ ಮಹಿಳೆ ಸಾವು…!!

ಬೆಂಗಳೂರು ಮೇ 21: ಬೆಂಗಳೂರಿನಲ್ಲಿ ಹಠಾತ್ತನೆ ಸುರಿದ ಮಳೆಗೆ ಜಲಾವೃತಗೊಂಡ ಕೆಆರ್ ವೃತ್ತದಲ್ಲಿನ ಅಂಡರ್ ಪಾಸ್ ನಲ್ಲಿ ಕಾರೊಂದು ಸಿಲುಕಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಸಾವನಪ್ಪಿದ್ದಾರೆ.
ಮೃತರನ್ನು ಇನ್ಪೋಸಿಸ್ ಉದ್ಯೋಗಿ ಭಾನುರೇಖಾ ಎಂದು ಗುರುತಿಸಲಾಗಿದೆ. ಮೃತ ಮಹಿಳೆ ಕುಟುಂಬದವರು ಬೆಂಗಳೂರು ನೋಡಲು ವಿಜಯವಾಡದಿಂದ ಆಗಮಿಸಿದ್ದರು. ಆಂಧ್ರದಿಂದ ಬಂದು ನಗರದ ಪ್ಯಾಲೆಸ್, ಲಾಲ್‌ಬಾಗ್, ಕಬ್ಬನ್ ಪಾರ್ಕ್, ವಿಧಾನಸೌದ ಸೇರಿದಂತೆ ಹಲವು ಕಡೆ ಪ್ರವಾಸ ಮುಗಿಸಿ ಬಂದಿದ್ದರು. ಕುಟುಂಬದವರು ಕಾರಿನಲ್ಲಿ ತೆರಳುತ್ತಿದ್ದರು. ಭಾರೀ ಮಳೆಯಿಂದಾಗಿ ಕೆಆರ್ ಸರ್ಕಲ್ ಅಂಡರ್‌ಪಾಸ್‌ನಲ್ಲಿ ನೀರು ತುಂಬಿತ್ತು. ತಿಳಿಯದೆಯೇ ಇವರು ಅಂಡರ್‌ಪಾಸ್ ಮುಖಾಂತರ ಹಾದುಹೋಗಲು ಕಾರು ಚಾಲನೆ ಮಾಡಿದ್ದಾರೆ. ನೀರು ತುಂಬಿದ್ದರಿಂದ ಕಾರು ಅಲ್ಲೇ ಸಿಲುಕಿಕೊಂಡಿದೆ. ನಂತರ ಇವರು ಹೊರಬರಲು ಕಾರಿನ ಗ್ಲಾಜ್ ಇಳಿಸಿದ್ದಾರೆ. ಹೀಗೆ ಮಾಡುತ್ತಿದ್ದಂತೆ ನೀರು ಕಾರಿನೊಳಗಡೆ ನುಗ್ಗಿದೆ.

ಈ ನಡುವೆ ಅಸ್ವಸ್ಥಗೊಂಡಿದ್ದ ಮಹಿಳೆ ಭಾನುರೇಖಾ ಅವರು ಸೇಂಟ್ ಮಾರ್ಥಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಸಿಎಂ ಸಿದ್ದರಾಮಯ್ಯ ಸೇಂಟ್ ಮಾರ್ಥಾಸ್ ಗೆ ಭೇಟಿ ನೀಡಿದ್ದು, ಮಹಿಳೆ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ. ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯ ತೋರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲಾಗುವುದು ಎಂದು ಸಿಎಂ ಹೇಳಿದ್ದಾರೆ.