Connect with us

DAKSHINA KANNADA

ಮಳೆ ಅಬ್ಬರ – ಜಲಾವೃತವಾದ ಸುಳ್ಯ ತಾಲೂಕಿನ ಪ್ರದೇಶಗಳು…!!

ಸುಳ್ಯ ಅಗಸ್ಟ್ 5: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಮಳೆಯಿಂದಾಗಿ ಹಲವು ಪ್ರದೇಶಗಳು ಜಲಾವೃತವಾಗಿದ್ದು,. ಅಪಾಯದಲ್ಲಿರುವ ಮನೆಗಳ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.


ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿರುವ 4 ಗ್ರಾಮಗಳ ಜನ ತೀವ್ರ ಆತಂಕಕ್ಕೀಡಾಗಿದ್ದಾರೆ. ಹರಿಹರ, ಕೊಲ್ಲಮೊಗ್ರು, ಬಾಳುಗೋಡು ಹಾಗೂ ಕಲ್ಮಕಾರು ಗ್ರಾಮದಲ್ಲಿ ಮೇಘಸ್ಫೋಟ ಉಂಟಾಗಿದ್ದು, ಸಾಕಷ್ಟು ಹಾನಿ ಸಂಭವಿಸಿದೆ

ಸುಳ್ಯ ತಾಲ್ಲೂಕು ಹಾಗೂ ಕಡಬ ತಾಲ್ಲೂಕುಗಳ ಕಾಳಜಿ ಕೇಂದ್ರಗಳಲ್ಲಿ 58 ಮಂದಿ ಆಶ್ರಯ ಪಡೆದಿದ್ದಾರೆ. ಕಲ್ಮಕಾರು ಸಕಾ೯ರಿ ಪ್ರಾಥಮಿಕ ಶಾಲೆಯಲ್ಲಿ 21 ಮಂದಿ, ಸಂಪಾಜೆಯ ಸಜ್ಜನ ಪ್ರತಿಷ್ಠಾನದಲ್ಲಿ 12 ಮಂದಿ, ಸುಬ್ರಹ್ಮಣ್ಯದ ಅನಘ ವಸತಿಗೃಹದಲ್ಲಿ 13 ಮಂದಿ, ಯೇನೆಕಲ್ಲು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ 6 ಮಂದಿ ಇದ್ದಾರೆ ಎಂದು ತಾಲ್ಲೂಕು ಆಡಳಿತ ಮಾಹಿತಿ ನೀಡಿದೆ.


ನಿರಂತರ ಮಳೆಯಿಂದಾಗಿ ಮಡಪ್ಪಾಡಿಯಲ್ಲಿ ಅಪಾರ ಹಾನಿ ಸಂಭವಿಸಿದೆ. ಮಡಪ್ಪಾಡಿಯ ಗೋಳಿಯಡಿ ಎಂಬಲ್ಲಿ ಗುಡ್ಡ ಕುಸಿದು ರಸ್ತೆಗೆ ಮಣ್ಣು ಬಿದ್ದು‌ ಬ್ಲಾಕ್ ಆಗಿ, ವಾಹನ ಸಂಚಾರಕ್ಕೆ ಅಡಚಣೆಯಾಯಿತು. ಮಡಪ್ಪಾಡಿಯಿಂದ ಶೀರಡ್ಕ, ದೇರುಮಜಲು ಸಂಪರ್ಕಿಸುವ ರಸ್ತೆಯಲ್ಲಿ ಅಂಬೆಕಲ್ಲು ಎಂಬಲ್ಲಿ‌ ಬಿರುಕು ಕಾಣಿಸಿಕೊಂಡಿದ್ದು, ಆತಂಕದ ಪರಿಸ್ಥಿತಿ ಎದುರಾಗಿದೆ. ಹಾಡಿಕಲ್ಲು ಕಡೆಗಳಲ್ಲಿ ಸೇತುವೆ ಮಣ್ಣು ಕೊಚ್ಚಿ ಹೋಗಿದ್ದು, ಪೇರಪ್ಪ ಮಲೆ ಎಂಬುವರ ಅಂಗಳ ಕುಸಿದಿದೆ. ಪೂಂಬಾಡಿಯನ್ನು ಸಂಪರ್ಕಿಸುವ ಶೆಟ್ಟಿಮಜಲು ಸೇತುವೆ ಮುಳುಗಡೆಯಾಗಿ ತೋಟಗಳಿಗೂ ನೀರು ನುಗ್ಗಿತ್ತು. ಜಾಲುಮನೆ ಎಂಬಲ್ಲಿಯೂ ಸೇತುವೆಯ ಮಣ್ಣು ಕೊಚ್ಚಿ ಹೋಗಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *