DAKSHINA KANNADA
ಕರ್ನಾಟಕ ಕರಾವಳಿ ಜಿಲ್ಲೆಗಳು ಸೇರಿದಂತೆ ಸೆಪ್ಟೆಂಬರ್ 16ರವರೆಗೆ ಭಾರಿ ಗಾಳಿಮಳೆ…!
ಬೆಂಗಳೂರು,Sep 13 : ಕರಾವಳಿ ಜಿಲ್ಲೆಗಳು ಸೇರಿದಂತೆ ಸೆಪ್ಟೆಂಬರ್ 16ರವರೆಗೆ ಕರ್ನಾಟಕದ ಹಲವೆಡೆ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದ್ದು ಜೊತೆಗೆ ಭಾರಿ ಗಾಳಿಯ ಎಚ್ಚರಿಕೆ ರವಾನಿಸಿದೆ.
ಬೆಂಗಳೂರು ನಗರ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಕೊಡಗು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಮಳೆಯ ಜೊತೆಗೆ ಗಂಟೆಗೆ 30-40 ಕಿಮೀ ವೇಗದಲ್ಲಿ ಗಾಳಿ ಕೂಡ ಬೀಸಲಿದೆ ಎಂದು ಎಚ್ಚರಿಸಿದೆ. ಕರಾವಳಿ ಕರ್ನಾಟಕದಲ್ಲೂ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಮಂಗಳೂರು, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
You must be logged in to post a comment Login