LATEST NEWS
ಎಪ್ರಿಲ್ 2 ರಿಂದ ಭಾರೀ ಮಳೆ ಸಾಧ್ಯತೆ – ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಮಂಗಳೂರು ಮಾರ್ಚ್ 30: ಏಪ್ರಿಲ್ 2ರಿಂದ ರಾಜ್ಯಾದ್ಯಂತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ರಾಜ್ಯದ ಹಲವು ಕಡೆಗಳಲ್ಲಿ ಕಳೆದ ಒಂದು ವಾರದಿಂದ ಅಲ್ಲಲ್ಲಿ ಮಳೆಯಾಗುತ್ತಿದೆ. ವಿಜಯನಗರ, ಶಿವಮೊಗ್ಗ,ತುಮಕೂರು, ಮಂಡ್ಯ, ಕೋಲಾರ,ದಾವಣಗೆರೆ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್ನಲ್ಲಿ ಸಾಧಾರಣ ಮಳೆಯಾಗಲಿದೆ. ಈ ಬಾರಿ ಬಿರು ಬೇಸಿಗೆಯಲ್ಲೂ ಮಳೆಯಾಗುತ್ತಿರುವುದು ಜನರಲ್ಲಿ ಸಂತಸ ತಂದಿದೆ.
