Connect with us

LATEST NEWS

ಇಂದು ಮತ್ತೆ ನಾಳೆ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ…!!

ಮಂಗಳೂರು ಜುಲೈ 29 : ಇಂದು ಮತ್ತು ನಾಳೆ ರಾಜ್ಯದ ಕರಾವಳಿ ಹಾಗೂ ಒಳನಾಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಸೇರಿದಂತೆ ರಾಜ್ಯದ 23 ಜಿಲ್ಲೆಗಳಲ್ಲಿ ಹವಮಾನ ಇಲಾಖೆ ಎಲ್ಲೋ ಅಲರ್ಟ್ ಘೋಷಣೆ ಮಾಡಿದೆ.


ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಎರಡು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಕರಾವಳಿ ಗಾಳಿಯ ರಭಸ ಹೆಚ್ಚಾಗಿರುವ ಕಾರಣದಿಂದಾಗಿ ಮೀನುಗಾರರು ಎರಡು ದಿನಗಳ ಕಾಲ ಕಡಲಿಗೆ ಇಳಿಯಬಾರದು ಎಂದು ಇಲಾಖೆ ಎಚ್ಚರಿಕೆ ನೀಡಿದೆ

Facebook Comments

comments