LATEST NEWS
ಕರಾವಳಿಯಲ್ಲಿ ಮೂರು ದಿನ ಭಾರೀ ಮಳೆ ಸಾದ್ಯತೆ
ಮಂಗಳೂರು ನವೆಂಬರ್ 18: ಕರಾವಳಿಯಲ್ಲಿ ಮತ್ತೆ ಮೂರು ದಿನ ಗುಡುಗು ಸಿಡಿಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದೆ. ರಾಜ್ಯದಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಿದೆ.
ನವೆಂಬರ್ 18ರಿಂದ 20ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಗುಡುಗು ಸಿಡಿಲು ಸಹಿತ ಮಳೆಯಾಗಲಿದ್ದು, ನವೆಂಬರ್ 18ರಿಂದ ನವೆಂಬರ್ 19ರವರೆಗೆ ಬೆಂಗಳೂರು, ಬೆಂ.ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ.