LATEST NEWS
ಎಪ್ರಿಲ್ 14 ಮತ್ತು 15 ರಂದು ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ.. ಎಲ್ಲೋ ಅಲರ್ಟ್ ಘೋಷಣೆ
ಮಂಗಳೂರು ಎಪ್ರಿಲ್ 10: ಬಿಸಿಲ ಬೇಗೆಯಿಂದ ತತ್ತರಿಸಿರುವ ರಾಜ್ಯದಲ್ಲಿ ಎಪ್ರಿಲ್ 12 ರ ಬಳಿಕ ಮಳೆ ಬಿರುಸುಗೊಳ್ಳಲಿದೆ. ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನಾ ಇಲಾಖೆ ಮುನ್ಸೂಚನೆ ನೀಡಿದೆ.
ಎಪ್ರಿಲ್ 12 ರಿಂದ ಮಳೆಯಾಗುವ ಸಾಧ್ಯತೆ ಇದ್ದು ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣಕನ್ನಡ ಜಿಲ್ಲೆಯಲ್ಲಿ ಏಪ್ರಿಲ್ 14, 15ರಂದು ಗುಡುಗು ಮಿಂಚು ಸಹಿತ ಭಾರಿ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.
ಮುಂದಿನ 48 ತಾಸು ರಾಜ್ಯ ಕೆಲ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಬೀಳಲಿದೆ, ನಂತರ ಬಿರುಸುಗೊಳ್ಳಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
You must be logged in to post a comment Login