LATEST NEWS
ನವೆಂಬರ್ 20 ರವರೆಗೂ ಭಾರೀ ಮಳೆ ಸಾಧ್ಯತೆ….!!
ಮಂಗಳೂರು ನವೆಂಬರ್ 18: ಕರಾವಳಿಯಲ್ಲಿ ಮತ್ತೆ ಮಳೆ ಆರ್ಭಟ ಮುಂದುವರೆಯಲಿದ್ದು. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು ನವೆಂಬರ್ 20 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಸೇರಿದಂತೆ ಎಲ್ಲಾ ಕರಾವಳಿ ಜಿಲ್ಲೆಗಳಿಗೆ ಇಂದು ಹಳದಿ ಅಲರ್ಟ್ (Yellow Alert) ನೀಡಲಾಗಿದೆ.
ಕರ್ನಾಟಕದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಇಂದಿನಿಂದ 3 ದಿನ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ಶುಕ್ರವಾರ ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು ಮತ್ತು ಕೊಪ್ಪಳಕ್ಕೆ ಹಳದಿ ಅಲರ್ಟ್ ನೀಡಲಾಗಿದೆ. ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿಯೂ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ. ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಹಾಗೂ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಸೇರಿದಂತೆ ಪಶ್ಚಿಮಘಟ್ಟದ ಜಿಲ್ಲೆಗಳಿಗೆ ಇಂದು ಮತ್ತು ಶುಕ್ರವಾರ ಹಳದಿ ಅಲರ್ಟ್ ನೀಡಲಾಗಿದೆ. ಇದಲ್ಲದೆ, ಶನಿವಾರ ಪಶ್ಚಿಮ ಘಟ್ಟದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.