LATEST NEWS
ಕರಾವಳಿಯಲ್ಲಿ ಭಾನುವಾರ ಭಾರೀ ಮಳೆ ಸಾಧ್ಯತೆ – ಹವಮಾನ ಇಲಾಖೆ
ಮಂಗಳೂರು ಸೆಪ್ಟೆಂಬರಕ್ 28: ಕರಾವಳಿ ಜಿಲ್ಲೆ ಉಡುಪಿ ಹಾಗೂ ದಕ್ಷಿಣಕನ್ನಡದಲ್ಲಿ ನಾಳೆ ಭಾನುವಾರು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಭಾನುವಾರ ಭಾರಿ ಮಳೆಯಾಗುವ ಸಾಧ್ಯತೆ ಬಗ್ಗೆ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, ನಾಲ್ಕು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಿದೆ.
ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ. ಈ ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಂಭವವಿದೆ. ಹಾಸನ, ಕೊಡಗು, ಮೈಸೂರು ಮತ್ತು ಚಿತ್ರದುರ್ಗ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.
You must be logged in to post a comment Login