LATEST NEWS
ಭಾರಿ ಮಳೆ ಹಿನ್ನಲೆ ನಾಳೆ (ಜುಲೈ 20) ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ – ಜಿಲ್ಲಾಧಿಕಾರಿ

ಭಾರಿ ಮಳೆ ಹಿನ್ನಲೆ ನಾಳೆ (ಜುಲೈ 20) ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ – ಜಿಲ್ಲಾಧಿಕಾರಿ
ಮಂಗಳೂರು ಜುಲೈ 19: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ನಾಳೆ 20.07.2019 ರಂದು ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶಿಸಿದ್ದಾರೆ.
ಕರಾವಳಿಯಲ್ಲಿ ಕಳೆದೆರಡು ದಿನಗಳಿಂದ ಭಾರಿ ಮಳೆ ಸುರಿಯುತ್ತಿದ್ದ, ಅಲ್ಲದೆ ಮುಂಗಾರು ಮಳೆ ಮತ್ತಷ್ಟು ಬಿರುಸಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಈಗಾಗಲೇ ಮುನ್ಸೂಚನೆ ನೀಡಿದೆ.

ದಿನಾಂಕ 20.07.2019 ರಿಂದ 22.07.2019 ರವರೆಗೆ ಜಿಲ್ಲೆಯಲ್ಲಿ ಪ್ರತಿದಿನ 200 ಮಿಲಿಮೀಟರ್ ಮಳೆ ಬೀಳುವ ಸಾಧ್ಯತೆ ಇದ್ದು, ಕೇಂದ್ರ ಹವಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ದಿನಾಂಕ 20 ರಿಂದ 22 ರವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದ್ದು, ನೀರು ತುಂಬುವ ತಗ್ಗು ಪ್ರದೇಶ, ಕೆರೆ, ಸಮುದ್ರಕ್ಕೆ ಸಾರ್ವಜನಿಕರು ತೆರಳದಂತೆ ಎಚ್ಚರಿಕೆ ನೀಡಲಾಗಿದೆ.