LATEST NEWS
ಭಾರೀ ಗಾಳಿ ಮಳೆಯಾಗುವ ಸಂಭವ ನಾಳೆ ದಕ್ಷಿಣಕನ್ನಡ ಜಿಲ್ಲೆ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ

ಭಾರೀ ಗಾಳಿ ಮಳೆಯಾಗುವ ಸಂಭವ ನಾಳೆ ದಕ್ಷಿಣಕನ್ನಡ ಜಿಲ್ಲೆ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ
ಮಂಗಳೂರು ಅಗಸ್ಟ್ 13: ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ನಾಳೆ ಅಗಸ್ಟ್ 14 ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ, ಹಾಗೂ ಪಿಯುಸಿ, ಡಿಪ್ಲೋಮಾ ಮತ್ತು ಪದವಿ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಮುಂದಿನ 24 ಗಂಟೆಗಳ ಕಾಲ ವಿಪರೀತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿರುವುದರಿಂದ ಮುಂಜಾಗೃತ ಕ್ರಮವಾಗಿ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಡಾ.ಶಶಿಕಾಂತ್ ಸೆಂಥಿಲ್ ಡಿಗ್ರಿ ಕಾಲೇಜು ಸೇರಿದಂತೆ ಎಲ್ಲಾ ಶಾಲಾ ಕಾಲೇಜುಗಳಿಗೆ ನಾಳೆ ಅಗಸ್ಟ್ 14 ರಜೆ ಘೋಷಿಸಿದ್ದಾರೆ.
