LATEST NEWS
ಮುಂಗಾರು ಪ್ರವೇಶ – ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ …!!
ಮಂಗಳೂರು ಜೂನ್ 5: ಕರಾವಳಿಗೆ ಮುಂಗಾರು ಮಳೆ ಪ್ರವೇಶಿಸಿರುವ ಹಿನ್ನಲೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಎರಡು ದಿನ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಶನಿವಾರ ‘ರೆಡ್ ಅಲರ್ಟ್’ ಘೋಷಿಸಲಾಗಿದೆ’ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿಗೆ ಜೂನ್ 5 ರ ನಂತರ ಮುಂಗಾರು ಪ್ರವೇಶಿಸಬಹುದೆಂದು ಹವಾಮಾನ ಇಲಾಖೆ ನಿರೀಕ್ಷಿಸಿತ್ತು, ಆದರೆ ಒಂದು ದಿನ ಮುನ್ನವೇ ಮುಂಗಾರು ರಾಜ್ಯಕ್ಕೆ ಪ್ರವೇಶಿಸಿದೆ. ಈ ಹಿನ್ನಲೆ ನಿನ್ನೆಯಿಂದಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಪ್ರಾರಂಭವಾಗಿದೆ.
ಕರಾವಳಿ ಹಾಗೂ ದಕ್ಷಿಣ ಒಳನಾಡು ಪ್ರವೇಶಿಸಿರುವ ಮುಂಗಾರು, ಉತ್ತರ ಒಳನಾಡಿಗೆ ಶನಿವಾರ ಪ್ರವೇಶಿಸಲಿದೆ. ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಶನಿವಾರ ‘ರೆಡ್ ಅಲರ್ಟ್’ ಘೋಷಿಸಲಾಗಿದೆ’ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿಯಲ್ಲಿ ಮಳೆ ತೀವ್ರಗೊಳ್ಳುವ ಸೂಚನೆ ಇರುವುದರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.