LATEST NEWS
ಎಪ್ರಿಲ್ 1 ರಿಂದ 3ರವರೆಗೆ ಕರಾವಳಿಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ

ಮಂಗಳೂರು ಮಾ.31: ಉಡುಪಿ ದಕ್ಷಿಣಕನ್ನಡ ಮತ್ತು ಉತ್ತರಕನ್ನಡ ಜಿಲ್ಲೆಯಲ್ಲಿ ಎಪ್ರಿಲ್ 1 ರಿಂದ ಮೂರ ವರೆಗೆ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಾದ್ಯಂತ ಏಪ್ರಿಲ್ 1 ರಿಂದ 3 ರವರೆಗೆ ಮೋಡ ಕವಿದ ವಾತಾವರಣದೊಂದಿಗೆ, ಗುಡುಗು, ಮಿಂಚು & ಬಿರುಗಾಳಿ ಸಹಿತ ಗಾಳಿಯ ವೇಗ ಗಂಟೆಗೆ 40-50 ಕಿಮೀ ತಲುಪುವ ಸಾದ್ಯತೆಯಿದ್ದು, ಉತ್ತರ ಒಳನಾಡು ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗುವ ಸಾದ್ಯತೆ ಇದೆ.

ಅಲ್ಲದೆ ದಕ್ಷಿಣ ಒಳನಾಡು & ಕರಾವಳಿ ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಇನ್ನುಳಿದ ದಿನಗಳಲ್ಲಿ ಒಣ ಹವೆಯಿರುವ ಸಾಧ್ಯತೆಯಿದೆ. ಈ ನಡುವೆ ಕರಾವಳಿ ಕರ್ನಾಟಕ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ 02 ಮತ್ತು 03 ಏಪ್ರಿಲ್ ರಂದು ಮತ್ತು ದಕ್ಷಿಣ ಒಳನಾಡಿನಲ್ಲಿ 03 ಏಪ್ರಿಲ್ 2025 ರಂದು ಅಲ್ಲಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ಎಚ್ಚರಿಸಿದೆ.