Connect with us

LATEST NEWS

ಕರಾವಳಿಯಲ್ಲಿ ಭಾರೀ ಮಳೆ ಮುನ್ಸೂಚನೆ ರೆಡ್ ಅಲರ್ಟ್ ಘೋಷಣೆ

ಮಂಗಳೂರು ಸೆಪ್ಟೆಂಬರ್ 10: ಕರಾವಳಿ ಜಿಲ್ಲೆಗಳಲ್ಲಿ ಮತ್ತೆ ಮಳೆ ಆರಂಭಗೊಂಡಿದೆ. ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಗಳಲ್ಲಿ ಇಂದು ಬೆಳಿಗ್ಗೆಯಿಂದಲೇ ಭಾರೀ ಮಳೆಯಾಗುತ್ತಿದೆ. ಕಳೆದ ಕೆಲವು ದಿನಗಳಿಂದ ಬಿಡುವು ಪಡೆದಿದ್ದ ಮಳೆ ಮತ್ತೆ ಆರಂಭವಾಗಿದ್ದು, ಹವಮಾನ ಇಲಾಖೆ ಇಂದು ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.


ಇನ್ನೂ ಮೂರು ದಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಸೆಪ್ಟೆಂಬರ್ 12 ರಂದು ಭಾರೀ ಮಳೆ ಸುರಿಯುವ ಸಾಧ್ಯತೆ ಇದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ.

Facebook Comments

comments