Connect with us

    LATEST NEWS

    ಫೆಂಗಲ್ ಚಂಡಮಾರುತ ಹಿನ್ನಲೆ ಡಿಸೆಂಬರ್ 3ರಂದು ದಕ್ಷಿಣಕನ್ನಡ ಜಿಲ್ಲೆಯ ಎಲ್ಲಾ ಶಾಲೆ, ಪಿಯು ಕಾಲೇಜುಗಳಿಗೆ ರಜೆ : ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

    ಮಂಗಳೂರು ಡಿಸೆಂಬರ್ 2: ಫೆಂಗಲ್‌ ಚಂಡಮಾರುತದ ಅಬ್ಬರಕ್ಕೆ ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿದೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಳೆ ಮುಂದುವರೆದಿದ್ದು, ಇದೀಗ ಜಿಲ್ಲೆಯ ಎಲ್ಲಾ ಶಾಲಾ ಪಿಯು ಕಾಲೇಜುಗಳಿಗೆ ನಾಳೆ ಡಿಸೆಂಬರ್ 3 ರಂದು ರಜೆ ಘೋಷಿಸಲಾಗಿದೆ.


    ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತ ಪರಿಣಾಮದಿಂದ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಆರೆಂಜ್ ಅಲರ್ಟ್ ಘೋಷಣೆಯಾಗಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, (12ನೇ ತರಗತಿವರೆಗೆ) ದಿನಾಂಕ: 03-12-2024 ರಂದು ರಜೆಯನ್ನು ಘೋಷಿಸಲಾಗಿದೆ.

    ಅಲ್ಲದೆ ದುರ್ಬಲ / ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ, ಪ್ರವಚನಗಳಿಗೆ ಬಳಸುವಂತಿಲ್ಲ. ಈ ನಿಟ್ಟಿನಲ್ಲಿ ಶಾಲಾ ಕಾಲೇಜುಗಳ ಮುಖ್ಯಸ್ಥರು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನಹರಿಸುವುದು.
    ಜಿಲ್ಲೆಯಲ್ಲಿ ವಿಪರೀತ ಮಳೆ ಸುರಿಯುತ್ತಿರುವುದರಿಂದ ಸಾರ್ವಜನಿಕರು ನದಿಗಳ/ತೋಡುಗಳ ಮತ್ತು ವಿದ್ಯುತ್ ಕಂಬ/ತಂತಿ ಸಮೀಪ ಹೋಗದಂತೆ ಎಚ್ಚರಿಕೆ ವಹಿಸುವುದು.

    ಪ್ರಾಕೃತಿಕ ವಿಕೋಪದಿಂದ ಯಾವುದೇ ರೀತಿಯ ಘಟನೆಗಳು ಸಂಭವಿಸಿದಲ್ಲಿ ಅಥವಾ ಸಂಭವಿಸಬಹುದಾದ ಸೂಚನೆ ಇದ್ದಲ್ಲಿ ಸಾರ್ವಜನಿಕರು ಕೂಡಲೇ ಸಂಬಂಧಪಟ್ಟ ಪಂಚಾಯತ್/ನಗರ ಸ್ಥಳೀಯ ಸಂಸ್ಥೆಗಳಿಗೆ ಮಾಹಿತಿಯನ್ನು ನೀಡುವುದು. ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *