LATEST NEWS
ಕರಾವಳಿಯಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆ ಸಾಧ್ಯತೆ – ಹವಮಾನ ಇಲಾಖೆ

ಕರಾವಳಿಯಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆ ಸಾಧ್ಯತೆ – ಹವಮಾನ ಇಲಾಖೆ
ಮಂಗಳೂರು ಜೂನ್ 7: ಮುಂಗಾರು ಮಳೆ ಪ್ರವೇಶಕ್ಕೆ ಅಗತ್ಯ ವಾತಾವರಣ ನಿರ್ಮಾಣವಾಗಿರುವ ಹಿನ್ನಲೆಯಲ್ಲಿ ಮುಂದಿನ 24 ಗಂಟೆಗಳಲ್ಲಿ ದಕ್ಷಿಣ ಒಳನಾಡು ಹಾಗೂ ಕರಾವಳಿಯ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಭಾಗದಲ್ಲಿರುವ ಮೇಲ್ಮೈ ಸುಳಿಗಾಳಿ ಹಾಗೂ ಗಾಳಿಯ ಒತ್ತಡ ಕಡಿಮೆಯಾಗಿದ್ದು, ಇದರೊಂದಿಗೆ ಮುಂಗಾರು ಪ್ರವೇಶಿಸಲು ಅಗತ್ಯ ವಾತಾವರಣ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಮುಂದಿನ 24 ಗಂಟೆಗಳಲ್ಲಿ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹೆಚ್ಚಿನ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದೆ.

ಮುಂದಿನ 24 ಗಂಟೆಗಳಲ್ಲಿ ಗಾಳಿಯು ಗಂಟೆಗೆ 40-50 ಕಿ.ಮೀ. ವೇಗದಲ್ಲಿ ಬೀಸಲಿದ್ದು, ಕಡಲ ತೀರದಲ್ಲಿ ಅಲೆಗಳ ಅಬ್ಬರ ಹೆಚ್ಚಲಿದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.